ಲಾಲು ನೇತೃತ್ವದ ಆರ್‌ಜೆಡಿ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ

ಪಾಟ್ನಾ, ಸೋಮವಾರ, 27 ಜನವರಿ 2014 (18:45 IST)

PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರ್ ರಾಜ್ಯದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ನೇತೃತ್ವದ ಆರ್‌ಜೆಡಿ ಪಕ್ಷ,ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ನಿನ್ನೆ ನಡೆದ ಸಭೆಯಲ್ಲಿ ಚುನಾವಣಾ ಪೂರ್ವ ಮೈತ್ರಿಯ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗಿದ್ದು, ಘೋಷಣೆಯೊಂದೇ ಬಾಕಿಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಲಾಲು ನೇತೃತ್ವದ ಆರ್‌ಜೆಡಿ ಪಕ್ಷದ ನಾಲ್ಕು ಸಂಸದರಿದ್ದಾರೆ. ಕಾಂಗ್ರೆಸ್ ಪಕ್ಷದ ಇಬ್ಬರು ಸಂಸದರಿದ್ದು, ಲೋಕಜನಶಕ್ತಿ ಪಕ್ಷದ ರಾಮ್ ವಿಲಾಸ್ ಪಾಸ್ವಾನ್ ಕೂಡಾ ಮಿತ್ರಪಕ್ಷದ ಸದಸ್ಯರಾಗಲಿದ್ದಾರೆ ಎನ್ನಲಾಗಿದೆ.

ಕಳೆದ 2004ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ ಪಕ್ಷಗಳು ಹೊಂದಾಣಿಕೆ ಮಾಡಿ ಭರ್ಜರಿ ಜಯಭೇರಿ ಬಾರಿಸಿದ್ದವು. ಆದರೆ, 2009ರಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಕಣಕ್ಕಿಳಿದು ಭಾರಿ ಸೋಲನ್ನು ಅನುಭವಿಸಿತ್ತು.ಇದರಲ್ಲಿ ಇನ್ನಷ್ಟು ಓದಿ :