ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ನಿಲೇಕಣಿಯಿಂದ ಪಾದಯಾತ್ರೆ

ಬೆಂಗಳೂರು, ಗುರುವಾರ, 20 ಮಾರ್ಚ್ 2014 (15:15 IST)

PTI
ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ಪಾದಯಾತ್ರೆ ಮೂಲಕ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಹಾಲಿ ಸಂಸದ ಅನಂತ್ ಕುಮಾರ್ ವಿರುದ್ಧ ಸ್ಪರ್ಧಿಸಿರುವ ನಿಲೇಕಣಿ ಚುನಾವಣೆಯಲ್ಲಿ ಜಯಗಳಿಸಲು ಶತಾಯ ಗತಾಯ ಗೆಲ್ಲಲು ಹರಸಾಹಸ ಪಡುತ್ತಿದ್ದಾರೆ.

ನಿಲೇಕಣಿ ಪ್ರತಿನಿತ್ಯ ಬೆಳಿಗ್ಗೆ ಕ್ಷೇತ್ರದ ಬೀದಿ ಬೀತಿಗಳಲ್ಲಿ ಸಂಚರಿಸಿ ಮತಯಾಚಿಸುತ್ತಿದ್ದಾರೆ.ಈ ಹಿಂದೆ ಹಾಲಿ ಸಂಸದ ಅನಂತ್ ಕುಮಾರ್ ಕೂಡಾ ತಮ್ಮ ಕ್ಷೇತ್ರದಾದ್ಯಂತ ಭಾರಿ ಪ್ರಚಾರ ಆರಂಭಿಸಿದ್ದರು. ಉಭಯರ ಜಿದ್ದಾಜಿದ್ದಿನ ಕಣ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಮತ್ತು ನಾಲ್ವರು ಬಿಜೆಪಿ ಶಾಸಕರನ್ನು ಹೊಂದಿದೆ

ಆಸಕ್ತಿಕರ ವಿಷಯವೆಂದರೆ, ನಿಲೇಕಣಿ ತಮ್ಮ ಎದುರಾಳಿ ಅನಂತ್ ಕುಮಾರ್ ವಿರುದ್ಧ ವೈಯಕ್ತಿಕ ಟೀಕೆಗಳನ್ನು ಮಾಡುತ್ತಿಲ್ಲ. ಕೇವಲ ಅಭಿವೃದ್ಧಿ ಮಂತ್ರ ಜಪಿಸಿ ಜನರ ಮನ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...