ವಾರಣಾಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿಯಲಿದ್ದಾರೆ ದಿಗ್ವಿಜಯ್ ಸಿಂಗ್!

ದೆಹಲಿ, ಗುರುವಾರ, 20 ಮಾರ್ಚ್ 2014 (11:51 IST)

PTI
ವಾರಣಾಸಿಯಿಂದ ಸ್ಪರ್ಧಿಸುತ್ತಿರುವ ಭಾರತ ಜನತಾ ಪಕ್ಷದ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಬಲಿಷ್ಠ ಉಮೇದುವಾರನನ್ನು ಕಣಕ್ಕಿಳಿಸಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಮೋದಿಯ ಗೆಲುವನ್ನು ಪ್ರಯಾಸದಾಯಕವಾಗಿಸಲು ಅದು ಪಕ್ಷದ ಮಹಾಸಚಿವ ದಿಗ್ವಿಜಯ್ ಸಿಂಗ್ ರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಕಾಂಗ್ರೆಸ್ಸಿನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮೋದಿಗೆ ಎದುರಾಳಿಯಾಗಿ ಆಖಾಡಕ್ಕಿಳಿಯಲು ತಯಾರಾಗಿದ್ದಾರೆ. ಪಕ್ಷದ ವಾರಣಾಸಿ ಘಟಕ ಅವರ ಹೆಸರನ್ನು ಸಲಹೆ ಮಾಡಿದೆ. ಬಹುಶಃ ಶುಕ್ರವಾರ ಅವರ ಹೆಸರನ್ನು ಘೋಷಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಆಮ್ ಆದ್ಮಿ ಪಕ್ಷ ಕೂಡ ಕೇಜ್ರಿವಾಲ್ ರನ್ನು ಇಲ್ಲಿಯ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ನಿರ್ಧರಿಸಿದೆ. ಆದರೆ ಕೇಜ್ರಿವಾಲ್ ತಾನು 25 ಮಾರ್ಚ್ ಗೆ ವಾರಣಾಸಿಯ ಜನರ ಅಭಿಪ್ರಾಯ ಕೇಳಿ ತಮ್ಮ ಪಕ್ಷದ ಅಭ್ಯರ್ಥಿ ಯಾರೆಂದು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

ತಾವು ಬೇರೆ ಪಕ್ಷದ ಜತೆ ಸೇರಿ ಅಭ್ಯರ್ಥಿಯನ್ನು ನಿರ್ಧರಿಸುವುದಿಲ್ಲ, ಜತೆಗೆ ದುರ್ಬಲ ಅಭ್ಯರ್ಥಿಯನ್ನು ಸಹ ಕಣಕ್ಕಿಳಿಸುವುದಿಲ್ಲ ಎಂದು ಕಾಂಗ್ರೆಸ್ ಈ ಮೊದಲೇ ಹೇಳಿಕೊಂಡಿದೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...