ವಾರಾಣಸಿಯಲ್ಲಿ ಕೇಜ್ರಿವಾಲ್ ಭಾಷಣದ ಮುಖ್ಯಾಂಶಗಳು ಕೆಳಗಿವೆ ಓದಿ

ಮಂಗಳವಾರ, 25 ಮಾರ್ಚ್ 2014 (19:33 IST)

PR
PR
ವಾರಾಣಸಿ: ಆಮ್ ಆದ್ಮಿ ಮುಖಂಡ ಅರವಿಂದ್ ಕೇಜ್ರಿವಾಲ್ ಉತ್ತರಪ್ರದೇಶದ ವಾರಾಣಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಅವರ ಭಾಷಣದ ಮುಖ್ಯಾಂಶಗಳು ಕೆಳಗಿನಂತಿವೆ. ನಾವು ಏನು ತಪ್ಪು ಮಾಡಿದೆವು? ನಮಗೆ ಕಪ್ಪು ಧ್ವಜಗಳನ್ನು ತೋರಿಸಲಾಯಿತು. ನರೇಂದ್ರ ಮೋದಿ ಗೂಂಡಾಗಳು ಕಪ್ಪು ಮಸಿಯನ್ನು ಚೆಲ್ಲಿದರು. ಬಿಜೆಪಿ ಸೋನಿಯಾ, ರಾಹುಲ್ ಗಾಂಧಿ, ಕಪಿಲ್ ಸಿಬಲ್, ಸಲ್ಮಾನ್ ಖುರ್ಷಿದ್ ಅವರಿಗೆ ಕಪ್ಪು ಧ್ವಜ ತೋರಿಸಿದೆಯಾ? ಎಂದು ಪ್ರಶ್ನಿಸಿದರು.ಕಾಂಗ್ರೆಸ್ ನರೇಂದ್ರ ಮೋದಿ, ನಿತಿನ್ ಗಡ್ಕರಿ, ಯಡಿಯೂರಪ್ಪ ಅವರಿಗೆ ಕಪ್ಪು ಧ್ವಜ ತೋರಿಸಿದೆಯೇ, ಇಲ್ಲ, ತೋರಿಸಿಲ್ಲ
ಕಾಂಗ್ರೆಸ್ ಮತ್ತು ಬಿಜೆಪಿ ಕೈಗೂಡಿಸಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷ್ಯ ಬೇಕೆ?

ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ಈ ದೇಶವನ್ನು ಲೂಟಿ ಮಾಡುತ್ತಿದೆ. ಕಾಶಿಗೆ ನೀವು ಬಂದರೆ ಗಂಗಾ ನದಿ ಎಷ್ಟೇ ಮಲಿನವಾಗಿದ್ದರೂ ಪವಿತ್ರ ಸ್ನಾನ ಮಾಡಬೇಕು. ವಾರಾಣಸಿಯಲ್ಲಿ ರಸ್ತೆಗಳು, ವಿದ್ಯುತ್, ನೀರು ಪ್ರತಿಯೊಂದು ದುಸ್ಥಿತಿಯಲ್ಲಿವೆ. ವಾರಾಣಸಿಯ ಜನರಿಗೆ ಒಂದು ಸಿಹಿಸುದ್ದಿ, ಚುನಾವಣೆ ಆಯೋಗ ನಮ್ಮ ಮನವಿಗೆ ಸ್ಪಂದಿಸಿ ಅನಿಲ ದರ ಏರಿಕೆಯನ್ನು 2 ತಿಂಗಳ ಕಾಲ ಮುಂದುವರಿಸಿದೆ.2 ತಿಂಗಳ ನಂತರ ನೀವು ತಪ್ಪು ಸರ್ಕಾರವನ್ನು ಆಯ್ಕೆ ಮಾಡಿದರೆ ಈ ಭ್ರಷ್ಟಾಚಾರಕ್ಕೆ ನಮ್ಮನ್ನು ದೂರಬೇಡಿ. ನನಗೆ ದುರಾಸೆ ಇದ್ದಿದ್ದರೆ ಮುಖ್ಯಮಂತ್ರಿ ಹುದ್ದೆ ಏಕೆ ತ್ಯಜಿಸುತ್ತಿದ್ದೆ.

ಲೋಕಪಾಲ ಮಸೂದೆಗೆ ಕಾಂಗ್ರೆಸ್, ಬಿಜೆಪಿ ಅವಕಾಶ ನೀಡದಿದ್ದರಿಂದ ಮುಖ್ಯಮಂತ್ರಿ ಹುದ್ದೆ ಬಿಡಬೇಕಾಯಿತು.ಬಿಜೆಪಿ ಮತ್ತು ಕಾಂಗ್ರೆಸ್ ಅನೇಕ ವರ್ಷಗಳ ಕಾಲ ಈ ದೇಶವನ್ನು ಲೂಟಿ ಮಾಡಿದವು. ನರೇಂದ್ರ ಮೋದಿ ಗುಜರಾತಿನಲ್ಲಿ ಅಭಿವೃದ್ಧಿ ಮಾಡಿದ್ದಾರೆಂದು ಕೆಲವು ಮಾಧ್ಯಮಗಳು ನನಗೆ ಪಕ್ಷ ಮುಖ್ಯವಲ್ಲ, ದೇಶ ಮುಖ್ಯ, ಗುಜರಾತಿನಲ್ಲಿ ನಾನು ಕಂಡ ದೃಶ್ಯದಿಂದ ಮೋದಿ ವಿರುದ್ಧ ನಿಲ್ಲುವಂತೆ ಮಾಡಿದೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...