'ಶಾಯಿ ಅಳಿಸಿ, ಎರಡು ಬಾರಿ ಮತ ನೀಡಿ' ಎಂದು ಕರೆ ಕೊಟ್ಟ ಶರದ್ ಪವಾರ್

ಮುಂಬೈ, ಸೋಮವಾರ, 24 ಮಾರ್ಚ್ 2014 (16:33 IST)

PTI
'ಎರಡು ಬಾರಿ ಮತ ಚಲಾಯಿಸಿ' ಎಂದು ತನ್ನ ಬೆಂಬಲಿಗರಿಗೆ ಕರೆ ನೀಡುವುದರ ಮೂಲಕ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ನಾಯಕ ಕೇಂದ್ರ ಸಚಿವ ಶರದ್ ಪವಾರ ಚುನಾವಣಾ ಆಯೋಗದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ನವಿ ಮುಂಬೈನಲ್ಲಿ ನಡೆದ ಸಭೆಯಲ್ಲಿ ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಪವಾರ್ "ನೀವು ನಿಮ್ಮ ನಿಮ್ಮ ಊರುಗಳಲ್ಲಿ ಮೊದಲು ಓಟು ಮಾಡಿ, ನಿಮ್ಮ ಕೈ ಮೇಲಿನ ಶಾಯಿಯನ್ನು ಅಳಿಸಿ. ಮತ್ತೆ ನೀವು ಕೆಲಸ ಮಾಡುತ್ತಿರುವ ಸ್ಥಳದಲ್ಲಿ ಮತ್ತೆ ಮತ ಚಲಾಯಿಸಿ " ಎಂದು ಹೇಳಿದ್ದರು. ಅವರ ಈ ಹೇಳಿಕೆಗೆ ಮಹಾರಾಷ್ಟ್ರ ಚುನಾವಣೆ ಅಧಿಕಾರಿಗಳು ಸ್ಪಷ್ಟನೆ ಕೇಳಿದ್ದಾರೆ.

ನಂತರ 73 ವರ್ಷದ ರಾಜಕಾರಣಿ ತನ್ನ ಕಾಮೆಂಟಿಗೆ ಅದು ಆ ಸಂದರ್ಭಕ್ಕೆ ಬಂದ ಮಾತು ಎಂದು ಸ್ಪಷ್ಟನೆ ನೀಡಿದ್ದಾರೆ.

"ನಾನು ಮತ ಚಲಾಯಿಸುವಂತೆ ಜನರನ್ನು ಪ್ರೋತ್ಸಾಹಿಸಲು ಬಯಸಿದ್ದೆ. ಸರಿಯಾದ ನಿರ್ಧಾರವನ್ನು ತೆಗೆದುಕೊಂಡು ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ಜನರಲ್ಲಿ ಮನವಿ ಮಾಡುತ್ತಿದ್ದೆ " ಎಂದು ಅವರು ವರದಿಗಾರರಲ್ಲಿ ತಿಳಿಸಿದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...