ಸಹೋದರ ಮತ್ತು ಅಮ್ಮನಿಗಾಗಿ ಮಾತ್ರ ಚುನಾವಣೆ ಪ್ರಚಾರ : ಪ್ರಿಯಾಂಕಾ

ದೆಹಲಿ, ಗುರುವಾರ, 10 ಏಪ್ರಿಲ್ 2014 (18:02 IST)

ಲೋಕಸಭಾ ಚುನಾವಣೆಗಾಗಿ ತನ್ನ ತಾಯಿ ಸೋನಿಯಾ ಗಾಂಧಿ ಮತ್ತು ಸಹೋದರ ರಾಹುಲ್ ಗಾಂಧಿ ಪರವಾಗಷ್ಟೇ ನಡೆಸುತ್ತೇನೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

PTI

ದೇಶದಲ್ಲಿ ನರೇಂದ್ರ ಮೋದಿ ಅಲೆ ಇರುವುದನ್ನು ಅವರು ನಿರಾಕರಿಸಿದ್ದಾರೆ.

ದೆಹಲಿಯಲ್ಲಿಂದು ಪತಿ ರಾಬರ್ಟ್ ವಾದ್ರಾ ಜೊತೆಗೆ ಮತವನ್ನು ಚಲಾಯಿಸಲು ಬಂದ ಸಂದರ್ಭದಲ್ಲಿ ಮಾತನಾಡಿದ ಅವರು "ಕಾಂಗ್ರೆಸ್ಸಿನ ಇತರೆ ಮುಖಂಡರು ಪ್ರಚಾರಕ್ಕೆ ಬರುವಂತೆ ನನ್ನನ್ನು ಕೇಳಿಕೊಂಡರು ಸಹ, ನಾನು ಕೇವಲ ನನ್ನ ತಾಯಿ ಮತ್ತು ಸಹೋದರ ಪರವಾಗಿ ಮಾತ್ರ ಪ್ರಚಾರಕ್ಕಾಗಿ ಹೋಗುತ್ತಿದ್ದೇನೆ" ಎಂದು ಹೇಳಿದರು.

ಕೆಲವು ಕಾಂಗ್ರೆಸ್ ನಾಯಕರು ತಮ್ಮ ಪರ ಪ್ರಚಾರಕ್ಕೆ ಬರುವಂತೆ ಪ್ರಿಯಾಂಕಾರಲ್ಲಿ ವಿನಂತಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಪ್ರಿಯಾಂಕಾ ಈ ಹೇಳಿಕೆಗಳನ್ನು ನೀಡಿದ್ದಾರೆ.

ವಾರಣಾಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ, "ಪ್ರಿಯಾಂಕಾ ತನಗೆ ಎಲ್ಲಾ ಸಂಭಾವ್ಯ ಸಹಾಯ ನೀಡುವ ಆಶ್ವಾಸನೆ ನೀಡಿದ್ದಾರೆ" ಎಂದು ಹೇಳಿದ್ದರು. ಅಲ್ಲದೇ ಮೋದಿ ಸ್ಪರ್ಧಿಸುತ್ತಿರುವ ಎರಡನೇ ಕ್ಷೇತ್ರವಾದ ಗುಜರಾತಿನ ವಡೋದರ ರಲ್ಲಿ ಮೋದಿಗೆ ಸವಾಲು ನೀಡಲಿರುವ ಕಾಂಗ್ರೆಸ್ಸಿನ ಮತ್ತೊಬ್ಬ ಪಕ್ಷದ ಅಭ್ಯರ್ಥಿ ಮಧುಸೂದನ್ ಮಿಸ್ತ್ರಿ, ಸಹ " ಪ್ರಿಯಾಂಕಾ ತನಗಾಗಿ ಪ್ರಚಾರ ಮಾಡಿದರೆ ನಾನು ಅವರಿಗೆ "ಕೃತಜ್ಞರಾಗಿರುತ್ತೆನೆ" ಎಂದು ಹೇಳಿದ್ದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ಮುಲಾಯಂ ರೇಪಿಸ್ಟ್‌ಗಳ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ : ಮೋದಿ ಲೇವಡಿ

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ಹರಿಹಾಯ್ದಿರುವ ಬಿಜೆಪಿಯ ಪ್ರಧಾನಿ ಅಭ್ಯರ್ಥಿ ...

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ...

ಆಯೋಗದ ಕ್ಷಮೆ ಕೋರಲಾರೆ, ಆದ್ರೆ ಅಮಿತ್ ಶಾ ನಿಷೇಧ ತೆರುವುಗೊಳಿಸಿದ್ದು ಯಾಕೆ?: ಅಜಂ ಖಾನ್

ದ್ವೇಷದ ಭಾಷಣ ಕುರಿತಂತೆ ಚುನಾವಣೆ ಆಯೋಗದ ಕ್ಷಮೆಯಾಚಿಸಲು ನಿರಾಕರಿಸಿರುವ ಯುಪಿ ಸಚಿವ ಅಜಂ ಖಾನ್, ನನ್ನ ...

ಮುರಳಿ ಮನೋಹರ್ ಜೋಷಿ ಕಾಲಿಗೆ ಬಿದ್ದು ನಮಸ್ಕರಿಸಿದ ನರೇಂದ್ರ ಮೋದಿ

ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಪ್ರಚಾರ ವೇದಿಕೆಯಲ್ಲಿಯೇ, ಪಕ್ಷದ ಹಿರಿಯ ನಾಯಕ ಮುರಳಿ ...