ಸುಷ್ಮಾ ಸ್ವರಾಜ್ ಮೋದಿಗಿಂತ ಉತ್ತಮ ಪ್ರಧಾನಿ ಅಭ್ಯರ್ಥಿ: ದಿಗ್ವಿಜಯ್ ಸಿಂಗ್

ನವದೆಹಲಿ, ಮಂಗಳವಾರ, 25 ಮಾರ್ಚ್ 2014 (19:13 IST)

ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಗಿಂತ ಉತ್ತಮ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡುವ ಮೂಲಕ ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದ ಬೆಂಕಿಗೆ ತುಪ್ಪ ಸುರಿದಿದ್ದಾರೆ.

PTI

"ಬಿಜೆಪಿಯನ್ನು ಬೆಂಬಲಿಸದ ಹಲವರು ಕೂಡಾ ಅಟಲ್ ಬಿಹಾರಿ ವಾಜಪೇಯಿಯನ್ನು ಒಪ್ಪಿಕೊಂಡಂತೆ, ನರೇಂದ್ರ ಮೋದಿ ಬದಲಿಗೆ ಸುಷ್ಮಾರನ್ನು ಜನರು ಸ್ವೀಕರಿಸಲು ಸಿದ್ದರಿದ್ದಾರೆ" ಎಂದು ದಿಗ್ವಿಜಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮೋದಿ ಮತ್ತು ಸುಷ್ಮಾರನ್ನು ಸೇರಿದಂತೆ ಪಕ್ಷದ ಹಿರಿಯ ನಾಯಕರ ನಡುವೆ ಭಿನ್ನಮತವಿದೆ ಎನ್ನುವ ಸಮಯದಲ್ಲಿ ದಿಗ್ವಿಜಯ ಈ ಹೇಳಿಕೆಯನ್ನು ನೀಡಿದ್ದಾರೆ. ಜಸ್ವಂತ್ ಸಿಂಗರಿಗೆ ಟಿಕೆಟ್ ನಿರಾಕರಿಸಿದ್ದಕ್ಕಾಗಿ ನೊಂದಿರುವ ಸುಷ್ಮಾ "ಇದೊಂದು ತಪ್ಪು ನಡೆ ಎಂದು ಹೇಳಿದ್ದರು".

"ಬಿಜೆಪಿಯ ಎಲ್ಲ ನಿರ್ಧಾರಗಳನ್ನು ಮೋದಿಯೇ ತೆಗೆದು ಕೊಳ್ಳುತ್ತಾರೆ. ಬಿಜೆಪಿ ಎಂದರೆ ಮೋದಿ, ಮೋದಿ ಎಂದರೆ ಬಿಜೆಪಿ" ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಲೇವಡಿ ಮಾಡಿದ್ದಾರೆ.

ವಾರಣಾಸಿಯಲ್ಲಿ ಮೋದಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸುತ್ತೀರಾ? ಎಂದು ಕೇಳಿದಾಗ "ನಾನು ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ" ಎಂದರು.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...