ಸೆಕ್ಯೂಲರ್ ಪವನ್ ಕಲ್ಯಾಣ್ ನರೇಂದ್ರ ಮೋದಿಯನ್ನು ಭೇಟಿಯಾಗಬಾರದಿತ್ತು: ಚಿರಂಜೀವಿ

ಹೈದ್ರಾಬಾದ್, ಶನಿವಾರ, 22 ಮಾರ್ಚ್ 2014 (18:42 IST)

PTI
ಸಹೋದರ ಪವನ್ ಕಲ್ಯಾಣ ಜಾತ್ಯಾತೀತ ಮನೋಭಾವದವರಾಗಿದ್ದು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿರುವುದು ಅಚ್ಚರಿ ತಂದಿದೆ ಎಂದು ಕೇಂದ್ರ ಸಚಿವ ಮತ್ತು ಮೆಗಾಸ್ಟಾರ್ ಕೆ.ಚಿರಂಜೀವಿ ಹೇಳಿದ್ದಾರೆ.

ವಿಶಾಖಪಟ್ಟಣಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋದ್ರೋತ್ತರ ಗಲಭೆಯಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮೋದಿಯನ್ನು ಪವನ್ ಕಲ್ಯಾಣ ಭೇಟಿ ಮಾಡಬಾರದಾಗಿತ್ತು ಎನ್ನುವುದು ನನ್ನ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.

ನನ್ನ ಸಹೋದರ ಜಾತ್ಯಾತೀತ ಮನೋಭಾವನೆ ಹೊಂದಿರುವ ವ್ಯಕ್ತಿ. ಆದರೆ, ಬಿಜೆಪಿಯಲ್ಲಿನ ಕೋಮುವಾದಿ ನಾಯಕರುಗಳನ್ನು ಭೇಟಿ ಮಾಡುತ್ತಿರುವುದು ಆಶ್ಚರ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗೋದ್ರೋತ್ತರ ಗಲಭೆಯಲ್ಲಿ ಮೋದಿ ಭಾಗಿಯಾಗಿರುವ ಬಗ್ಗೆ ಅವರಿಗೆ ಮಾಹಿತಿ ಇರಲಿಕ್ಕಿಲ್ಲ ಎಂದು ನನಗೆ ಸಂಶಯವಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಮತ್ತು ಇತರ ಬಿಜೆಪಿ ನಾಯಕರು ಮುಸ್ಲಿಂ ಸಮುದಾಯದ ಕ್ಷಮೆಕೋರಿದ್ದಾರೆ. ಆದರೆ, ಮೋದಿ ಗೋದ್ರೋತ್ತರ ಗಲಭೆಯ ಬಗ್ಗೆ ಹೇಳಿಕೆಯೂ ನೀಡಿಲ್ಲ ಅಥವಾ ಕ್ಷಮೆ ಕೂಡಾ ಕೋರಿಲ್ಲ ಎಂದರು.

ತೆಲುಗು ಚಿತ್ರರಂಗದಲ್ಲಿ ಭಾರಿ ಜನಪ್ರಿಯತೆಯನ್ನು ಪಡೆದಿರುವ ನಟ ಪವನ್ ಕಲ್ಯಾಣ್ ಕಳೆದ ವಾರ ಜನಸೇನಾ ಎನ್ನುವ ಪಕ್ಷವನ್ನು ಹುಟ್ಟುಹಾಕಿ, ಮೋದಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...