ಸೋನಿಯಾ ಗಾಂಧಿ ವಿರುದ್ಧ ಉಮಾಭಾರತಿ ಸ್ಪರ್ಧಿಸಲಿ: ಬಾಬಾ ರಾಮದೇವ್

ನವದೆಹಲಿ, ಗುರುವಾರ, 27 ಮಾರ್ಚ್ 2014 (18:05 IST)

PTI
ಬಿಜೆಪಿ ನಾಯಕಿ ಫೈರ್ ಬ್ರಾಂಡ್ ಖ್ಯಾತಿಯ ಉಮಾಭಾರತಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಲು ಉತ್ಸಕರಾಗಿದ್ದಾರೆ ಎಂದು ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.

54 ವರ್ಷ ವಯಸ್ಸಿನ ಉಮಾಭಾರತಿಯನ್ನು ಉತ್ತರಪ್ರದೇಶದ ಝಾನ್ಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಆದರೆ, ಉಮಾಭಾರತಿಯವರನ್ನು ಸೋನಿಯಾ ವಿರುದ್ಧ ಕಣಕ್ಕಿಳಿಸುವಂತೆ ಬಿಜೆಪಿ ಹೈಕಮಾಂಡ್‌ಗೆ ರಾಮದೇವ್ ಲಾಭ ಮಾಡುತ್ತಿದ್ದಾರೆ.

ಉಮಾಭಾರತಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸಿದ್ದರಿಂದ ಸೋನಿಯಾ ವಿರುದ್ಧ ಸ್ಪರ್ಧಿಸುವ ಎಲ್ಲಾ ಅರ್ಹತೆ ಅವರಿಗಿದೆ. ಒಂದು ವೇಳೆ ಉಮಾಭಾರತಿಯವರನ್ನು ಸೋನಿಯಾ ವಿರುದ್ಧ ಕಣಕ್ಕಿಳಿಸಿದಲ್ಲಿ ನಾನು ಅವರ ಪರ ಪ್ರಚಾರ ಮಾಡುತ್ತೇನೆ ಎಂದು ಸವಾಲ್ ಹಾಕಿದ್ದಾರೆ.

ಬಿಜೆಪಿ ಹೈಕಮಾಂಡ್‌ ಉತ್ತಮ ಅಭ್ಯರ್ಥಿಗಳ ಬಗ್ಗೆ ಸಲಹೆ ಕೇಳಿದಲ್ಲಿ ಮಾತ್ರ ನಾನು ಮಾಹಿತಿ ನೀಡುತ್ತೇನೆ. ಬಿಜೆಪಿ ನಾಯಕಿ ಉಮಾಭಾರತಿ ಪರ ಲಾಬಿ ಮಾಡುತ್ತಿದ್ದೇನೆ ಎನ್ನುವುದು ತಪ್ಪು ತಿಳುವಳಿಕೆ ಎಂದು ಯೋಗಾ ಗುರು ಬಾಬಾ ರಾಮದೇವ್ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...