ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಲು ಉಮಾಭಾರತಿ ನಕಾರ

ನವದೆಹಲಿ, ಶುಕ್ರವಾರ, 28 ಮಾರ್ಚ್ 2014 (16:08 IST)

PTI
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಲ್ಲ ಎಂದು ಬಿಜೆಪಿ ಫೈರ್ ಬ್ರಾಂಡ್ ನಾಯಕಿ ಉಮಾಭಾರತಿ ಹೇಳಿದ್ದಾರೆ.

ಉತ್ತರಪ್ರದೇಶದ ಝಾನ್ಸಿ ಕ್ಷೇತ್ರದಿಂದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಉಮಾಭಾರತಿ, ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಕೊಟ್ಟಲ್ಲಿ ಸ್ಪರ್ಧಿಸುತ್ತೇನೆ. ಇಲ್ಲವಾದಲ್ಲಿ ಝಾನ್ಸಿಯಲ್ಲಿಯೇ ಲೋಕಸಭೆ ಚುನಾವಣೆ ಎದುರಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಉಮಾಭಾರತಿ ಲೋಕಸಭೆ ಚುನಾವಣೆಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡುವುದಾಗಿ ಯೋಗಾ ಗುರು ಬಾಬಾ ರಾಮದೇವ್ ಬಿಜೆಪಿ ಹೈಕಮಾಂಡ್‌ಗೆ ಮನವಿ ಸಲ್ಲಿಸಿದ್ದರು.

ಫೈರ್‌ಬ್ಯ್ರಾಂಡ್ ಉಮಾಭಾರತಿ ಝಾನ್ಸಿಯಲ್ಲಿ ಸ್ಪರ್ಧಿಸಿದಲ್ಲಿ ನೆರೆಯ ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳಿಗೆ ನೆರವಾಗಲಿದೆ ಎನ್ನುವುದು ಬಿಜೆಪಿ ಹೈಕಮಾಂಡ್ ತಂತ್ರವಾಗಿದೆ.

ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸಲಿರುವ ಅಮೇಠಿ ಕ್ಷೇತ್ರದಲ್ಲಿ ಅವರ ವಿರುದ್ಧ ಬಿಜೆಪಿ ನಾಯಕಿ ಸ್ಮೃತಿ ಇರಾನಿಯವರನ್ನು ಕಣಕ್ಕಿಳಿಸಿಲು ತಂತ್ರ ರೂಪಿಸಿದೆ. ಆಮ್ ಆದ್ಮಿ ಪಕ್ಷದಿಂದ ಹಿಂದಿ ಕವಿ ಕುಮಾರ್ ವಿಶ್ವಾಸ್ ಚುನಾವಣೆ ಕಣದಲ್ಲಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...