2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಬಿಜೆಪಿಯನ್ನು ಸೋಲಿಸುತ್ತದೆ: ರಾಹುಲ್

ನವದೆಹಲಿ, ಮಂಗಳವಾರ, 28 ಜನವರಿ 2014 (13:44 IST)

PTI
ಮುಂಬರುವ 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸೋಲಿಸಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನಕೇಂದ್ರ ಮೋದಿಯವರೊಂದಿಗೆ ನೇರ ಹಣಾಹಣಿಯಾದಲ್ಲಿ ಸೋಲುವ ಭೀತಿ ಕಾಡುತ್ತಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾಹುಲ್, ವಿಪಕ್ಷಗಳನ್ನು ಎದುರಿಸು ತಾಕತ್ತು ಕಾಂಗ್ರೆಸ್ ಪಕ್ಷಕ್ಕಿದೆ. ಭಾರತೀಯ ರಾಜಕಾರಣದಲ್ಲಿ ಪ್ರಸ್ತುತವಿರುವ ಪರಿಸ್ಥಿತಿಯನ್ನು ಬದಲಾಯಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

ಮಾಜಿ ಪ್ರಧಾನಿ ಇಂದಿರಾಗಾಂಧಿ ಮತ್ತು ತಂದೆ ರಾಜೀವ್ ಗಾಂಧಿಯವರ ಹತ್ಯೆಯ ನೋವನ್ನು ಮನಸ್ಸಿನಲ್ಲಿ ತುಂಬಿಕೊಂಡು ಬೆಳೆದಿದ್ದೇನೆ. ಅಜ್ಜಿ ಮತ್ತು ತಂದೆಯ ಸಾವನ್ನು ನೋಡಿದ್ದೇನೆ. ಅಜ್ಜಿ ಇಂದಿರಾ ಗಾಂಧಿ ಜೈಲಿಗೆ ಹೋಗಿರುವುದನ್ನು ನೋಡಿದ್ದೆ. ಇಂತಹ ಪರಿಸ್ಥಿತಿಗಳನ್ನು ಎದುರಿಸಿದ ನನಗೆ ಯಾವ ಮತ್ತು ಯಾರ ಭಯವು ಕಾಡುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :