ಎನ್ಡಿಎ ಸಂಚಾಲನಾ ಸಮಿತಿ ಅಧ್ಯಕ್ಷ ಸ್ಥಾನ ಅಥವಾ ಲೋಕಸಭಾ ಸ್ವೀಕರ್ ಹುದ್ದೆ ಸೇರಿದಂತೆ ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ಬಿಜೆಪಿ ವರಿಷ್ಠ ಆಡ್ವಾಣಿ ಒಪ್ಪಿದ್ದಾರೆ. ಆದರೆ ಸಂಪೂರ್ಣವಾಗಿ ಚುನಾವಣಾ ಫಲಿತಾಂಶ ಪ್ರಕಟವಾದ ಬಳಿಕ ಎರಡು ಹುದ್ದೆಗಳಲ್ಲಿ ಯಾವುದನ್ನು ಒಪ್ಪಿಕೊಳ್ಳಬೇಕು ಎಂಬ ಬಗ್ಗೆ ಆಡ್ವಾಣಿ ನಿರ್ಧಾರ ತಿಳಿಸಲಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ನವದೆಹಲಿಯಲ್ಲಿ ಆರ್ಎಸ್ಎಸ್ ನಾಯಕರು ಮತ್ತು ಬಿಜೆಪಿ ನಾಯಕರು ನಡೆಸಿದ ಸಭೆ- ಸಮಾಲೋಚನೆಗಳ ಫಲಶೃತಿ ಇದು.