ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನಿಂದಾಗಿ ಕಂಗೆಟ್ಟ ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ. ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ನಿತೀಶ್ ಕುಮಾರ್, ರಾಜ್ಯದಲ್ಲಿ ಕೇವಲ ಎರಡು ಲೋಕಸಭೆ ಸ್ಥಾನಗಳಲ್ಲಿ ಪಕ್ಷ ಗೆಲ್ಲಲು ಸಾಧ್ಯವಾಗಿದ್ದರಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಜೆಡಿಯು ಪಕ್ಷದ ಮೂಲಗಳು ತಿಳಿಸಿವೆ. ಬಿಹಾರ್ ರಾಜ್ಯದಲ್ಲಿ ಜೆಡಿಯು ಸರಕಾರವಿದ್ದರೂ ಲೋಕಸಭೆ