ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಇದುವರೆಗೆ ಒಟ್ಟು ನಾಲ್ಕು ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ ಬಿಜೆಪಿ ಒಟ್ಟು 13 ಲೋಕಸಭೆ ಕ್ಷೇತ್ರಗಳಲ್ಲಿ ಜಯಗಳಿಸಿದೆ. ಜೆಡಿಎಸ್ ಪಕ್ಷದ ಅಭ್ಯರ್ಥಿ ದೇವೇಗೌಡರು ಹಾಸನ ಕ್ಷೇತ್ರದಲ್ಲಿ ಜಯಗಳಿಸುವ ಮೂಲಕ ಜೆಡಿಎಸ್ ಪಕ್ಷದ ಪರವಾಗಿ ಖಾತೆಯನ್ನು ತೆರೆದಿದ್ದಾರೆ. ಕಾಂಗ್ರೆಸ್ ಪಕ್ಷದ ಗುಲ್ಬರ್ಗ ಕ್ಷೇತ್ರದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಆರ್. ಧ್ರುವನಾರಾಯಣ್, ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಬಿಜೆಪಿಯ ಜನಾರ್ದನ ಸ್ವಾಮಿ ವಿರುದ್ಧ ಗೆಲುವಿನ ನಗೆ