ಲೋಕಸಭೆ ಚುನಾವಣೆಯಲ್ಲಿ ಐತಿಹಾಸಿಕ ಜಯಗಳಿಸಿದ ಬಿಜೆಪಿಯ ಭಾವಿ ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಆಗಮಿಸುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ಸಂತಸ ಸಂಭ್ರಮದಿಂದ ಸ್ವಾಗತಿಸಿದರು. ಮೋದಿ ಗುಜರಾತ್ನಿಂದ ಇಂದು ಬೆಳಿಗೆ 11 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ನಿಲ್ದಾಣದ ಹೊರಗಡೆ ಬೆಳಿಗ್ಗೆಯಿಂದ ಕಾಯುತ್ತಿದ್ದ ಕಾರ್ಯಕರ್ತರು ಮೋದಿಯನ್ನು ಕಾಣುತ್ತಲೇ ಸಂತಸ ವ್ಯಕ್ತಪಡಿಸಿ ಬಿಜೆಪಿ ಕಚೇರಿಯವರೆಗೆ ಮೆರವಣಿಗೆಯಲ್ಲಿ ಸಾಗಿದರು. ಮೋದಿ ನಮ್ಮ ಸಿಂಹ. ದೇಶದ ಜನತೆಗಾಗಿ ಕಾರ್ಯನಿರ್ವಹಿಸುತ್ತಾರೆ. ಅಭಿವೃದ್ಧಿಗಾಗಿ ಪ್ರತಿಯೊಬ್ಬ