ದೇಶದ ಜನತೆಯ ತೀರ್ಪಿಗೆ ತಲೆಬಾಗುತ್ತೇವೆ: ಸೋನಿಯಾ, ರಾಹುಲ್

ಮೋದಿಗೆ ಶುಭಹಾರೈಸಿದ ಸೋನಿಯಾ ರಾಹುಲ್

ನವದೆಹಲಿ| Rajesh patil| Last Modified ಶುಕ್ರವಾರ, 16 ಮೇ 2014 (18:10 IST)
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸೋಲಿನ ನೈತಿಕ ಹೊಣೆ ಹೊತ್ತಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ದೇಶದ ಜನತೆಯ ತೀರ್ಪಿಗೆ ತಲೆಬಾಗುತ್ತೇವೆ ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ ಅವರಿಗೆ ಸೋನಿಯಾ, ರಾಹುಲ್ ಗಾಂಧಿ ಶುಭ ಹಾರೈಸಿದರು. ದೇಶದಾದ್ಯಂತ ಕಾಂಗ್ರೆಸ್‌ನ ಹೀನಾಯ ಸೋಲಿಗೆ ಕಾಂಗ್ರೆಸ್ ಅಧ್ಯಕ್ಷೆಯಾಗಿ ತಾನು ಸೋಲಿನ ಸಂಪೂರ್ಣ ನೈತಿಕ ಹೊಣೆಯನ್ನು ಹೊರುತ್ತೇನೆ ಎಂದು ಸೋನಿಯಾ ಹೇಳಿದರು.
ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ಚುನಾವಣೆಯನ್ನು ಎದುರಿಸಿದ್ದೇವು. ಆದರೆ ಜನತೆ ನಮ್ಮ ವಿರುದ್ಧವಾಗಿ ಮತ ಚಲಾಯಿಸಿರುವುದಕ್ಕೆ ನಾನು ತಲೆಬಾಗುತ್ತೇನೆ ಎಂದರು.
ಏತನ್ಮಧ್ಯೆ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಾತನಾಡಿ, ಜನರ ತೀರ್ಪಿಗೆ ನಾನು ತಲೆಬಾಗುತ್ತೇನೆ. ಚುನಾವಣೆಯಲ್ಲಿ ಸೋಲು ಗೆಲುವು ಇದ್ದದ್ದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುವುದಾಗಿ ಹೇಳಿದ್ದಾರೆ.

ಚುನಾವಣೆ ಫಲಿತಾಂಶಕ್ಕಾಗಿ ಕ್ಲಿಕ್ಕಿಸಿ


//elections.webdunia.com/karnataka-loksabha-election-results-2014.htm


//elections.webdunia.com/Live-Lok-Sabha-Election-Results-2014-map.htm

ಇದರಲ್ಲಿ ಇನ್ನಷ್ಟು ಓದಿ :