ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರ ರಚನೆಯಾಗುತ್ತಿರುವುದರಿಂದ ದೇಶದ ಮುಸ್ಲಿಮರು ಕೋಮುವಾದದ ಭೀತಿಯನ್ನು ಎದುರಿಸುತ್ತಿದ್ದಾರೆ ಎಂದು ದೆಹಲಿ ಜಾಮಾ ಮಸೀದಿಯ ಶಾಹಿ ಇಮಾಮ್ ಬುಖಾರಿ ಆತಂಕ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಶುಕ್ರವಾರದಂದು ಬಿಜೆಪಿ ಭರ್ಜರಿ ಬಹುಮತ ಪಡೆಯುತ್ತಿದ್ದಂತೆ ದೆಹಲಿ ಜಾಮಾ ಮಸೀದಿಯ ಶಾಹಿ ಇಮಾಮ್, ಪ್ರಾರ್ಥನೆ ಮುಕ್ತಾಯದ ನಂತರ ಮಸೀದಿಗೆ ಆಗಮಿಸಿದ್ದವರೊಂದಿಗೆ ಸಂವಾದದಲ್ಲಿ ತೊಡಗುವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಕಳೆದ 2002ರಲ್ಲಿ ಗುಜರಾತ್ನಲ್ಲಿ ನಡೆದ ದಂಗೆಯ ನಂತರ