ಮೈಸೂರು|
Rajesh patil|
Last Modified ಶುಕ್ರವಾರ, 16 ಮೇ 2014 (18:17 IST)
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪತ್ರಕರ್ತ ಪ್ರತಾಪ್ ಸಿಂಹ್ ಅವರು ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಎಚ್.ವಿಶ್ವನಾಥ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ತವರು ಜಿಲ್ಲೆಯ ಸೋಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ಮುಖಭಂಗವಾಗಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದರಿಂದ ತವರು ಜಿಲ್ಲೆ ಮೈಸೂರಿನಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಳ್ಳುವುದು ಅನಿವಾರ್ಯವಾಗಿತ್ತು. ಆದರೆ ಅವರು ಎಷ್ಟೇ ಪ್ರಯತ್ನ ಮಾಡಿದರೂ ಗೆಲುವು ತಮ್ಮದಾಗಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.
ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷ್ಣ್ಣರಾಜ, ಚಾಮರಾಜ, ನರಸಿಂಹರಾಜ, ಹುಣಸೂರು ಹಾಗೂ ಪಿರಿಯಾಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರೇ ಇದ್ದಾರೆ. ಚಾಮುಂಡೇಶ್ವರಿಯಲ್ಲಿ ಮಾತ್ರ ಜೆಡಿಎಸ್ ಶಾಸಕರಿದ್ದಾರೆ. ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಮಡಿಕೇರಿ ಮತ್ತು ವೀರಾಜಪೇಟೆಯಲ್ಲಿ ಬಿಜೆಪಿ ಶಾಸಕರಿದ್ದಾರೆ.