ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ವಿನಾಕಾರಣ ಜಾತಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಂತ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ದೂರಿದ್ದಾರೆ.ಬಿಜೆಪಿಯ ಶಾಸಕ ಅರವಿಂದ ಬೆಲ್ಲದ ಜಾತಿಯ ಕುರಿತಾಗಿ ಸಭೆ ನಡೆಸಿ ಮೈತ್ರಿ ಪಕ್ಷದ ಅಭ್ಯರ್ಥಿ ವಿನಯ ಕುಲಕರ್ಣಿ ಬಗ್ಗೆ ಆಪಾದನೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತ ಧರ್ಮದ ಹೋರಾಟದ ಅಸ್ತ್ರವನ್ನು ಹಿಡಿದು ಬಿಜೆಪಿಯವರು ರಾಜಕಾರಣ ಮಾಡುತ್ತಿರುವುದು ಖಂಡನೀಯವಾಗಿದೆ. ಅಲ್ಲದೇ