ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಡೈರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಡೈರಿ ಆರೋಪ ಸಾಬೀತು ಮಾಡಿಲಿ, ಇಲ್ವೇ ರಾಜೀನಾಮೆ ನೀಡಿಲಿ ಎಂದು ಬಹಿರಂಗವಾಗಿ ಸವಾಲು ಹಾಕಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಬೇಜವಾಬ್ದಾರಿ ಮನುಷ್ಯ. ಡೈರಿಯಲ್ಲಿ ಅಡ್ವಾಣಿಗೆ ಹಣ ಕೊಟ್ಟಿರುವ ಬಗ್ಗೆ ಬರೆದಿದ್ದೇನಂತೆ. ರಾಹುಲ್ ಗಾಂಧಿ ಮಾಡಿರುವ ಆರೋಪ ಸಾಬೀತು ಪಡಿಸಲಿ. ಇಲ್ಲದಿದ್ದರೆ ತಮ್ಮ ಹುದ್ದೆಗೆ ರಾಜೀನಾಮೆ