ಮೈಸೂರು ಮೈತ್ರಿ ಅಭ್ಯರ್ಥಿಯ ಗೆಲುವಿನ ಹೊಣೆಯನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ವಹಿಸಲಾಗಿದೆ.ಜೆಡಿಎಸ್ ಮಾಜಿ ಶಾಸಕ ಸುರೇಶ್ ಬಾಬು ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದು, ಮೈಸೂರಿನಲ್ಲಷ್ಟೇ ಅಲ್ಲಾ ಇಡೀ ರಾಜ್ಯದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನ ಗೆಲ್ಲಿಸುತ್ತೇವೆ.ಸಿದ್ದರಾಮಯ್ಯ ನವರು ದೇವೇಗೌಡರ ಪರ ಪ್ರಚಾರಕ್ಕೆ ಬಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ಮುಕ್ತ ಮನಸ್ಸಿನಿಂದ ದೇವೇಗೌಡರ ಪರ ಪ್ರಚಾರ ಮಾಡಿದ್ದಾರೆ ಎಂದರು.ಬಿಜೆಪಿಯವರಿಗೆ ನೈತಿಕತೆ ಇಲ್ಲಾ ಅವರ ಮಾತನ್ನ ಕೇಳಬೇಡಿ. ಯಾವುದನ್ನ ಮನಸ್ಸಿನಲ್ಲಿಟ್ಟುಕೊಳ್ಳದೆ ಮೈತ್ರಿ ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸಬೇಕು