ಯಾದಗಿರಿ : ಬಿಜೆಪಿಯವರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರನ್ನು ಕೊಂದವರು. ಅಂತವರಿಂದ ನಾನು ದೇಶಾಭಿಮಾನದ ಬಗ್ಗೆ ಪಾಠ ಕಲಿಯಬೇಕಾಗಿಲ್ಲ ಎಂದು ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ವಿ.ನಾಯಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತೀಯ ಸೇನೆಯ ಸಾಧನೆಯನ್ನು ರಾಜಕೀಯಕ್ಕೆ ಬಳಿಸಿಕೊಳ್ಳುವುದು ಸರಿಯಲ್ಲ. ಆರ್ಥಿಕ, ಸಾಮಾಜಿಕ ಸೇರಿದಂತೆ ಯಾವುದೇ ವಿಚಾರದಲ್ಲಿಯೂ ಪಾಕಿಸ್ತಾನ ನಮಗೆ ಸಮಾನವಾಗಿಲ್ಲ. ಬಿಜೆಪಿಯವರು ಪಾಕಿಸ್ತಾನದ ಹೆಸರನ್ನು ಹೇಳಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇದು ತಪ್ಪು ಎಂದು ನಾನು