ಮಂಡ್ಯ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ಬಹಿರಂಗ ಪ್ರಚಾರದ ಅಂತಿಮ ದಿನವಾದ ನಿನ್ನೆ ಮಂಡ್ಯ ರಣ ಕಣ ಕಾವೇರಿತ್ತು.ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ನಟರಾದ ಯಶ್ ಮತ್ತು ದರ್ಶನ್ ನಿನ್ನೆಯೂ ಬಿರುಸಿನ ಪ್ರಚಾರ ನಡೆಸಿದರೆ, ಅತ್ತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಿದರು.ಚುನಾವಣಾ ರ್ಯಾಲಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ವಿರುದ್ಧ ಏಕವಚನ ಪ್ರಯೋಗ ಮಾಡಿದ ಸಿಎಂ ಕುಮಾರಸ್ವಾಮಿ ಯಾವನೋ ಅವನು ಯಶ್?