ಬೆಂಗಳೂರು : ಬಾಲಕೋಟ್ ವೈಮಾನಿಕ ದಾಳಿಯನ್ನು ಬಿಜೆಪಿಯ ಸಾಧನೆ ಎನ್ನುವ ರೀತಿಯಲ್ಲಿ ಬಿಂಬಿಸಿ ಮತ ಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.