ವಿಜಯಪುರ : ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ವಿಚಾರವಾಗಿ ಕ್ಷಮೆ ಕೇಳಿದ ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಗೃಹ ಸಚಿವ ಎಂ.ಬಿ.ಪಾಟೀಲ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದ ಬಗ್ಗೆ ಮಾತನಾಡಲು ಡಿ.ಕೆ.ಶಿವಕುಮಾರ್ ಅವರಿಗೆ ಏನು ಅಧಿಕಾರವಿದೆ? ಕ್ಷಮೆ ಕೇಳಲು ಅವರು ಯಾರು? ಅವರಿಗೂ ಲಿಂಗಾಯತ ಧರ್ಮಕ್ಕೂ ಏನು ಸಂಬಂಧ? ಅವರೇನು ಕೆಪಿಸಿಸಿ ಅಧ್ಯಕ್ಷರೇ? ಡಿ.ಕೆ.ಶಿವಕುಮಾರ್ ಮೊದಲು ತಮ್ಮ ಸಮುದಾಯದಲ್ಲಿರುವ