ಚೆನ್ನೈ : ತಮಿಳುನಾಡಿನ ವೆಲ್ಲೂರು ಲೋಕಸಭಾ ಚುನಾವಣೆ ರದ್ದುಗೊಳಿಸಲು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು ಚುನಾವಣಾ ಆಯೋಗಕ್ಕೆ ಒಪ್ಪಿಗೆ ನೀಡಿದ್ದಾರೆ. ತಮಿಳುನಾಡಿನಲ್ಲಿ ವೆಲ್ಲೂರು ಸೇರಿದಂತೆ 38 ಲೋಕಸಭಾ ಕ್ಷೇತ್ರ ಚುನಾವಣೆ ಏಪ್ರಿಲ್ 18ರಂದು ನಿಗದಿಯಾಗಿತ್ತು. ಆದರೆ ಡಿಎಂಕೆ ನಾಯಕ ದೊರೈ ಮುರುಗನ್ ಮನೆಯ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆಯು ಏಪ್ರಿಲ್ 10ರಂದು ದಾಳಿ ಮಾಡಿತ್ತು. ಈ ವೇಳೆ ಅವರ ಗೋದಾಮಿನಲ್ಲಿ ಬರೋಬ್ಬರಿ 11.53 ಕೋಟಿ ರೂ. ಹಣ ಪತ್ತೆಯಾಗಿತ್ತು.