ತುಮಕೂರು : ಎಕ್ಸಿಟ್ ಪೋಲ್ ಸಮೀಕ್ಷೆಯಲ್ಲಿ ಬಿಜೆಪಿ ಪರವಾಗಿ ಇರುವುದನ್ನು ನೋಡಿ ಕೆಲವು ರಾಜಕೀಯ ಪಕ್ಷಗಳು ಚಿಂತೆಯಲ್ಲಿ ಮುಳುಗಿದ್ದರೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ದೇವೇಗೌಡರ ಕುರಿತು ವ್ಯಂಗ್ಯವಾಡಿದ್ದಾರೆ. ಚುನಾವಣೋತ್ತರ ಸಮೀಕ್ಷೆಯಿಂದ ದೇವೇಗೌಡರಿಗೆ ನಿದ್ದೆ ಬರುವುದಿಲ್ಲ. ಈ ಸಮೀಕ್ಷೆ ಬಂದು ಮತ್ತೆ ಪ್ರಧಾನಿಯಾಗುವ ಕನಸು ಕಂಡಿದ್ದ ದೇವೇಗೌಡರ ಆಸೆಗೆ ತಣ್ಣೀರು ಬಿದ್ದ ಹಾಗಿದೆ ಎಂದು ಲೇವಡಿ ಮಾಡಿದ್ದಾರೆ. ಮೋದಿ ಮತ್ತೆ ಪ್ರಧಾನಿ ಅನ್ನೋದನ್ನು ಸಮೀಕ್ಷೆ ಸಾಬೀತು