ಜಯಪ್ರದಾ ಖಾಕಿ ಅಂಡರ್ ವೇರ್ ಧರಿಸುತ್ತಾರೆ - ಸಮಾಜವಾದಿ ಪಕ್ಷದ ಮುಖಂಡನಿಂದ ವಿವಾದಾತ್ಮಕ ಹೇಳಿಕೆ

ಲಖನೌ, ಸೋಮವಾರ, 15 ಏಪ್ರಿಲ್ 2019 (11:11 IST)

ಲಖನೌ : ಬಿಜೆಪಿ ಅಭ್ಯರ್ಥಿ ಜಯಪ್ರದಾ ಖಾಕಿ ಅಂಡರ್ ವೇರ್ ಧರಿಸುತ್ತಾರೆ ಎಂದು ಕೀಳು ಮಟ್ಟದ ಹೇಳಿಕೆ ನೀಡುವುದರ ಮೂಲಕ  ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.


ಉತ್ತರ ಪ್ರದೇಶದ ರಾಂಪುರ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದ ರ್ಯಾಲಿಯ ವೇಳೆ ಮಾತನಾಡಿದ ಅವರು, 'ಜಯಪ್ರದಾ ಅವರನ್ನು ರಾಜಕೀಯಕ್ಕೆ ಕರೆತಂದಿದ್ದೇ ನಾನು. ಇದೇ ರಾಂಪುರದಿಂದ ಆಕೆಗೆ ಟಿಕೆಟ್ ಕೊಡಿಸಿದ್ದೆ. ಆಕೆಯ ಬಾಡಿಗಾರ್ಡ್ ನಂತೆ ಆಕೆಯನ್ನು ಯಾರೂ ಕೂಡ ಸ್ಪರ್ಶಿಸದಂತೆ ನೋಡಿಕೊಂಡೆ. ಆದರೆ ಆಕೆಯ ನಿಜವಾದ ಮುಖವನ್ನು ತಿಳಿಯಲು ನನಗೆ 17 ವರ್ಷಗಳೇ ಬೇಕಾಯಿತು. 17 ದಿನಗಳ ಹಿಂದಷ್ಟೇ ಆಕೆ ಖಾಕಿ ಅಂಡರ್ ವೇರ್ ಧರಿಸುತ್ತಾರೆ ಎಂದು ತಿಳಿಯಿತು ಎಂದು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಸಮ್ಮುಖದಲ್ಲೇ ಇಂತಹ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ.


ಅಜಂಖಾನ್ ಈ ಹೇಳಿಕೆ ಇದೀಗ ವ್ಯಾಪಕ ಟೀಕೆಗೆ ಗುರಿಯಾಗಿದ್ದು,  ಈ ಕೂಡಲೇ ಅಜಂಖಾನ್ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 
 ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ದೇವೇಗೌಡ- ಕುಮಾರಸ್ವಾಮಿಯ ನಡುವಿನ ಜಗಳ ಬೀದಿಗೆ ತಂದ ಬಿಜೆಪಿ ಶಾಸಕ

ಬೆಂಗಳೂರು : ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರನ್ನು ಅವರ ಪುತ್ರ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ...

news

ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಯಿಂದ ಮಹಿಳೆಯರಿಗೆ ವಂಚನೆ

ಬೆಂಗಳೂರು : ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹಣ ಕೊಡುತ್ತೇನೆ ಎಂದು ಹೇಳಿ ಮಹಿಳೆಯರನ್ನು ಪ್ರಚಾರಕ್ಕೆ ...

news

ಚಿತ್ರದುರ್ಗದ ರ್ಯಾಲಿಯ ವೇಳೆ ಪ್ರಧಾನಿ ಮೋದಿ ತಂದ ಟ್ರಂಕ್ ರಹಸ್ಯ ಬಯಲು

ಚಿತ್ರದುರ್ಗ : ರ್ಯಾಲಿ ವೇಳೆ ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇನ್ನೋವಾ ಕಾರಿಗೆ ತುಂಬಿಸಿದ ಟ್ರಂಕ್ ...

news

ಕೈ ನಾಯಕ ರಾಜಣ್ಣ ಪರೋಕ್ಷವಾಗಿ ನಮಗೆ ಬೆಂಬಲ ನೀಡುತ್ತಾರೆ - ಬಿಜೆಪಿ ನಾಯಕರಿಂದ ಅಚ್ಚರಿಯ ಹೇಳಿಕೆ

ತುಮಕೂರು : ಕಾಂಗ್ರೆಸ್ ಮಾಜಿ ಶಾಸಕ ಕೆಎನ್ ರಾಜಣ್ಣ ಅವರು ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ನಮಗೆ ಬೆಂಬಲ ...