ಕುಮಾರಸ್ವಾಮಿ ಅಳುಮಂಜಿ ಅನ್ನೋದು ಮತ್ತೆ ಸಾಬೀತಾಗಿದೆ- ಜಗದೀಶ್ ಶೆಟ್ಟರ್ ವ್ಯಂಗ್ಯ

ಹುಬ್ಬಳ್ಳಿ, ಮಂಗಳವಾರ, 16 ಏಪ್ರಿಲ್ 2019 (14:12 IST)

ಹುಬ್ಬಳ್ಳಿ : ಮತ್ತೆ ಸಿಎಂ ಕುಮಾರಸ್ವಾಮಿ ಕಣ್ಣೀರಿನ ಧಾರೆ ಹರಿಸಿದಕ್ಕೆ ದೇವೇಗೌಡರು ಮತ್ತು ಜೆಡಿಎಸ್ ಕುಟುಂಬ ರಾಜಕಾರಣದ ಸಿಂಬಲ್ ಕಣ್ಣೀರಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ಸಿಎಂ ಕುಮಾರಸ್ವಾಮಿ ಅವರು ಹತಾಶರಾಗಿದ್ದು, ಯಾವುದೇ ಕಾರಣಕ್ಕೂ ನಾನು ಕಣ್ಣೀರು ಹಾಕುವುದಿಲ್ಲ ಎಂದು ಹೇಳಿದ್ದರು. ಆದರೆ ಸೋಲುವ ಭೀತಿಯಿಂದ ಮತ್ತೆ ಸೋಮವಾರ ಹತಾಶರಾಗಿ ಕಣ್ಣೀರು ಹಾಕಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಅಳುಮಂಜಿ ಅನ್ನೋದು ಮತ್ತೆ ಸಾಬೀತಾಗಿದೆ ಎಂದು ಲೇವಡಿ ಮಾಡಿದ್ದಾರೆ.


 

ಕಣ್ಣಿರು ಸುರಿಸಿ ಅಧಿಕಾರ ಹಿಡಿಯಬೇಕು ಅಂತ ಜೆಡಿಎಸ್ ಹೊರಟಿದೆ. ಆದರೆ ಅದು ಸಾಧ್ಯವಾಗುವುದಿಲ್ಲ. ರಾಜ್ಯದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಬಿಜೆಪಿ ಅಲೆಯಿದೆ. ಬಿಜೆಪಿ ಶಿಸ್ತು ಬದ್ಧವಾಗಿ ಪ್ರಚಾರ ಮಾಡುತ್ತಿದೆ. ನರೇಂದ್ರ ಮೋದಿ, ಅಮಿತ್ ಷಾ ಅವರು ದೊಡ್ಡ ಮಟ್ಟದಲ್ಲಿ ರ‍್ಯಾಲಿಗಳಿಂದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ. ಕಾಂಗ್ರೆಸ್-ಜೆಡಿಎಸ್ ನಾಯಕರ ಮಧ್ಯೆ ಮುಸುಕಿನ ಗುದ್ದಾಟ ಮುಂದುವರಿದಿದೆ. ಇದರಿಂದ ಮೈತ್ರಿ ಸರ್ಕಾರದಲ್ಲಿ ಅಸಮಾಧಾನದಿಂದ ಕಾಂಗ್ರೆಸ್ ಜೆಡಿಎಸ್ ಮುಳುವಾಗಲಿದೆ ಎಂದು ಅವರು ಹೇಳಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ದೇಶದ ಅತೀ ಶ್ರೀಮಂತ ಎನಿಸಿಕೊಂಡ ರಾಜಕೀಯ ಪಕ್ಷ ಯಾವುದು ಗೊತ್ತಾ?

ನವದೆಹಲಿ : ದೇಶದ ಅತೀ ಶ್ರೀಮಂತ ಪಕ್ಷ ಯಾವುದು ಎಂಬ ಕುತೂಹಲ ಹಲವರಲ್ಲಿದ್ದು, ಇದೀಗ ಈ ಮಾಹಿತಿ ...

news

ಮತ್ತೆ ಜೆಡಿಎಸ್ ನಾಯಕರ ಆಪ್ತರ ಮೇಲೆ ಐಟಿ ದಾಳಿ

ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ಹೊತ್ತಲೇ ಜೆಡಿಎಸ್ ನಾಯಕರು ಮತ್ತು ಅವರ ಆಪ್ತರ ಮನೆಯ ...

news

ಸುಮಲತಾ ಬಿಜೆಪಿ ಸೇರಲು ಚರ್ಚೆ ನಡೆಸಿದ ವಿಡಿಯೋ ರಿಲೀಸ್ ಮಾಡುತ್ತೇವೆ-ಹೊಸ ಬಾಂಬ್ ಸಿಡಿಸಿದ ಪುಟ್ಟರಾಜು

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಬಿಜೆಪಿ ಸೇರಲು ಸಿದ್ಧತೆ ...

news

ಸಂವಿಧಾನ ಸುಡುತ್ತೇವೆ ಎನ್ನುವ ಬಿಜೆಪಿಯವರಿಗೆ ಬೆಂಬಲ ಸೂಚಿಸುತ್ತಿರುವ ನಿಮಗೆ ನಾಚಿಕೆಯಾಗಲ್ವಾ- ಸ್ಪೀಕರ್ ವಿರುದ್ಧ ಮುನಿಯಪ್ಪ ವಾಗ್ದಾಳಿ

ಕೋಲಾರ : ಸಂಸದ, ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರು ...