ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೇಳುವ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರದ ಅವಧಿಯನ್ನು 1 ದಿನ ಕಡಿತಗೊಳಿಸಿದ ಚುನಾವಣಾ ಆಯೋಗದ ಕ್ರಮಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಿಡಿಕಾರಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕೋಲ್ಕತ್ತಾದಲ್ಲಿ ರೋಡ್ ಷೋ ನಡೆಸಿದ ಸಂದರ್ಭದಲ್ಲಿ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಭಾರಿ ಗಲಾಟೆ, ಮಾರಾಮಾರಿ ನಡೆದಿತ್ತು. ಈ ಕಾರಣದಿಂದ ಆಯೋಗವು ತನ್ನ ಸಾಂವಿಧಾನಿಕ ವಿಶೇಷ ಹಕ್ಕನ್ನು