ಮಂಡ್ಯ: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಆರೋಪಗಳು ಪ್ರತ್ಯಾರೋಪಗಳು ಜೋರಾಗಿ ನಡೆದಿದೆ. ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ನಡೆಸುತ್ತಿರುವ ರಾಕಿಂಗ್ ಸ್ಟಾರ್ ಯಶ್ ವಿರುದ್ಧ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಟೀಕಾ ಪ್ರಹಾರ ನಡೆಸಿದ್ದಾರೆ.ರಾಕಿಂಗ್ ಸ್ಟಾರ್ ಯಶ್ ಬಾಡಿಗೆ ಮನೆ ವಿವಾದದ ಬಗ್ಗೆ ಕೆಣಕಿ ನಿಖಿಲ್ ಮಾತನಾಡಿದ್ದು, ಮನೆ ಬಾಡಿಗೆ ಕಟ್ಟದವರು ನಮ್ಮ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ಗುಡುಗಿದ್ದಾರೆ.ಯಶ್ ಬಾಡಿಗೆ ಮನೆ ವಿವಾದ ಕೋರ್ಟ್ ನಲ್ಲಿದೆ. ಮನೆ ಮಾಲಿಕರು