ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ನಾಯಕರ ವಿರುದ್ಧ ಭುಗಿಲೆದ್ದ ಆಕ್ರೋಶ ವ್ಯಾಪಕ ಸ್ವರೂಪ ಪಡೆದುಕೊಳ್ಳುತ್ತಿದೆ. ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ವಿರುದ್ಧ ಘೋಷಣೆ ಕೂಗಲಾಗುತ್ತಿದೆ. ಇಂಡುವಾಳು ಸಚ್ಚಿದಾನಂದ ಮನೆಯಲ್ಲಿ ನಡೆದ ಸಭೆ ಬಳಿಕ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮೊಮ್ಮಗನನ್ನು ಬೆಳೆಸಲು ಮಂಡ್ಯವನ್ನ ಜೆಡಿಎಸ್ ಆಯ್ಕೆ ಮಾಡಿಕೊಂಡಿದೆ. ಮಂಡ್ಯದಲ್ಲಿ ಕಾಂಗ್ರೆಸ್ಗೆ ಅಸ್ತಿತ್ವದ ಪ್ರಶ್ನೆ ಎದುರಾಗಿದೆ. ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು, ಅಂಬಿ ಅಣ್ಣನ