ಬೆಂಗಳೂರು : ಸಿದ್ದರಾಮಯ್ಯನವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡವಾಗ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಕೆಲವರು ಚಮಚಗಿರಿ ಮಾಡುತ್ತಿದ್ದಾರೆ. ಅವರೇನು ದೇವರಾಜ ಅರಸು ರೀತಿ ಆಡಳಿತ ಕೊಟ್ಟಿದ್ದಾರಾ? ಬಾಯಿ ಚಪಲಕ್ಕೆ ಮತ್ತೆ ಸಿಎಂ ಆಗುತ್ತೇನೆ ಅಂತಾರೆ ಎಂದು ಹೇಳಿದ್ದರು. ಈ ಹೇಳಿಕೆಯ ಬಗ್ಗೆ ಬೇಸರಗೊಂಡ