ಬೆಂಗಳೂರು : ಜೆಡಿಎಸ್ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಮುಂದೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಲಾಗಿದೆ. ಸಿದ್ಧರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಹೇಳಿಕೆ ನೀಡಿದ್ದ ವಿಚಾರ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಪರಸ್ಪರ ವಾಗ್ದಾಳಿಗೆ ಕಾರಣವಾಗಿದ್ದು, ಸಿದ್ದರಾಮಯ್ಯ ವಿರುದ್ಧ ಕಾಲು ಕೆರೆದು ಜಗಳಕ್ಕೆ ಬರುವಂತೆ ಜೆಡಿಎಸ್ ಪಕ್ಷದ ಮುಖಂಡರು ಹೇಳಿಕೆ ನೀಡುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸಿದ್ದರಾಮಯ್ಯ ಅವರನ್ನು