ನವದೆಹಲಿ : ಇಡೀ ದೇಶದ ಜನತೆ ಕುತೂಹಲದಿಂದ ಕಾಯುತ್ತಿರುವ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಮತಏಣಿಕೆಯ ಕಾರ್ಯ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಮ್ ಗಳು ಓಪನ್ ಆಗಿದ್ದು, ಮೊದಲಿಗೆ ಅಂಚೆ ಮತ ಎಣಿಕೆ ನಡೆದು ಆಮೇಲೆ ಇವಿಎಂ ಎಣಿಕೆ ಶುರುವಾಗಲಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೊದಲ ಫಲಿತಾಂಶ ಹೊರಬರಲಿದ್ದು ಸಂಜೆ 6 ಗಂಟೆಯ ವೇಳೆಗೆ ಎಲ್ಲಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಲಿದೆ