ಲೋಕಸಭಾ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಮಾಶಾಸನ ಮಂಜೂರು ಮಾಡಿ, ಸರ್ಕಾರಿ ಸೇವೆಯಲ್ಲಿ ನಿರ್ಲಕ್ಷತನ ಮತ್ತು ಕರ್ತವ್ಯ ಲೋಪವೆಸಗಿರುವ ಉಪ ತಹಶೀಲ್ದಾರರನ್ನು ಅಮಾನತ್ ಮಾಡಲಾಗಿದೆ.ಹುಮನಾಬಾದ ತಾಲೂಕಿನ ಹಳ್ಳಿಖೇಡ (ಬಿ) ನಾಡ ಕಚೇರಿಯ ಉಪ ತಹಶೀಲ್ದಾರ ಪ್ರೇಮದಾಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಸುಬೋದ ಯಾಧವ ಆದೇಶ ಹೊರಡಿಸಿದ್ದಾರೆ.ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)