ಮಂಡ್ಯ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ದೂರು ಸಲ್ಲಿಸಿದೆ.ದೂರು ಸಲ್ಲಿಸಿದ ಬಿಜೆಪಿ ವಕ್ತಾರ ಗೋ.ಮಧುಸೂಧನ್, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಅವರ ನಾಮಪತ್ರವನ್ನು ಎರಡೆರಡು ಬಾರಿ ತಿದ್ದುಪಡಿ ಮಾಡಿಕೊಂಡು ಬರಲು ಕಾನೂನು ಬಾಹಿರವಾಗಿ ಅವಕಾಶ ಮಾಡಿಕೊಟ್ಟಿದ್ದಾರೆ. ಸುಮಲತಾ ಅವರ ಏಜೆಂಟ್ ಮದನ್ ಗೆ ಲಿಖಿತ ದೂರು ಸಲ್ಲಿಸುವಂತೆ ಹೇಳಿ, ಅವರು ದೂರು ಬರೆದು ಸಲ್ಲಿಸುವಷ್ಟರಲ್ಲಿ ನಿಖಿಲ್ ನಾಮಪತ್ರ ಅಂಗೀಕರಿಸಿದ್ದಾರೆ. ನಾಮಪತ್ರ ಪರಿಶೀಲನೆಯ ಸಂದರ್ಭದ ವಿಡಿಯೋ ಕೊಡುವ ವಿಷಯದಲ್ಲೂ