ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಎಂಬ ಹೇಳಿಕೆಗೆ ಸಿಎಂ ಹೆಚ್.ಡಿ.ಕೆ ಹೇಳಿದ್ದೇನು?

ಬೆಂಗಳೂರು| pavithra| Last Modified ಗುರುವಾರ, 9 ಮೇ 2019 (07:21 IST)
ಬೆಂಗಳೂರು : ಮತ್ತೊಮ್ಮೆ ಸಿಎಂ ಆಗ್ತಾರೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬುಧವಾರ ಸಿಎಂ ಕಚೇರಿ ಕೃಷ್ಣಾದಲ್ಲಿ ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ದ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಹೇಳಿಕೆಯ ಬಗ್ಗೆ ತಮ್ಮ ಬೇಸರವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.
ನಿಮ್ಮ ಪಕ್ಷದ ಶಾಸಕರು ಪದೇ ಪದೇ ಸಿಎಂ ಸ್ಥಾನದ ವಿಚಾರ ಪ್ರಸ್ತಾಪ ಮಾಡಿದ್ದಾರೆ.


ನಾನು ರಾಜ್ಯದ ಮುಖ್ಯಮಂತ್ರಿಯಾಗಿರುವಾಗ ಹೀಗೆ ಹೇಳಿಕೆ ನೀಡುವುದು ಸರಿಯೇ..? ಜನರಲ್ಲಿ ನನ್ನ ಬಗ್ಗೆ ಯಾವ ರೀತಿಯ ಭಾವನೆ ಮೂಡಲಿದೆ ನೀವೆ ಹೇಳಿ,. ?ಸಮ್ಮಿಶ್ರ ನಡೆಸುವ ನನಗೆ ಮುಜುಗರ ಆಗುತ್ತಿದೆ. ಮೊದಲು ಇಂತಹ ಹೇಳಿಕೆಗಳಿಗೆ ಬ್ರೇಕ್ ಹಾಕಿ, ನಿಮ್ಮ ಶಾಸಕರನ್ನು ಕರೆಸಿ ಸ್ವಲ್ಪ ಹೇಳಿ ಎಂದು ಸಿಎಂ ಖಡಕ್ ಆಗ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :