ಶ್ರೀ ಕ್ಷೇತ್ರ ಸುತ್ತೂರಿನ ವಿಶಿಷ್ಟ ಜಾತ್ರೆಗೆ ನೀವೂ ಬನ್ನಿ

WD
ಇತರೆಡೆಗಳಲ್ಲಿ ಆಚರಿಸುವ ಜಾತ್ರೆಗೆ ಹೋಲಿಸಿದರೆ ಮೈಸೂರಿನ ನಂಜನಗೂಡು ತಾಲೂಕು ಸುತ್ತೂರು ಶ್ರೀ ಕ್ಷೇತ್ರದ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರೆ ವಿಭಿನ್ನ ಹಾಗೂ ವಿಶಿಷ್ಟವಾಗಿದೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಹಾಗೆ ನೋಡಿದರೆ ಸುತ್ತೂರಿನಲ್ಲಿ ನಡೆಯುವ ಜಾತ್ರೆ ಬರೀ ಜಾತ್ರೆಯಾಗಿರದೆ ಇದೊಂದು ಪರಂಪರೆ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕ್ಕತಿಕ ಮಹೋತ್ಸವಗಳ ಸಂಗಮದೊಂದಿಗೆ ಗ್ರಾಮೀಣ ಸೊಗಡನ್ನು ಬಿಂಬಿಸುವ ಕಲೆಗಳ ಪ್ರದರ್ಶನ ಎಂದರೆ ತಪ್ಪಾಗಲಾರದು.

ಕಪಿಲಾ ನದಿ ದಡದಲ್ಲಿ ನೆಲೆನಿಂತಿರುವ ಸುತ್ತೂರು ಕ್ಷೇತ್ರದಲ್ಲಿ ನಡೆಯುವ ಜಾತ್ರೆ ಒಂದು ದಿನದಲ್ಲಿ ಮುಗಿದು ಹೋಗುವ ಜಾತ್ರೆಯಲ್ಲ. ಸುಮಾರು ಆರು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಆರೋಗ್ಯ ಮೇಳ, ಕೃಷಿ ಮೇಳ, ಉತ್ಪಾದಕ ಮತ್ತು ಗ್ರಾಹಕ ಮೇಳ, ಕ್ರೀಡಾ ಮೇಳ, ಸಾಂಸ್ಕ್ಕತಿಕ ಮೇಳ, ಶೈಕ್ಷಣಿಕ ಮೇಳ, ಸಾಹಿತ್ಯ ಮತ್ತು ಪುಸ್ತಕ ಮೇಳ, ಸರ್ವಧರ್ಮ ಸಮ್ಮಿಲನ, ಸಾಮೂಹಿಕ ವಿವಾಹ, ವಿವಿಧ ವಸ್ತು ಪ್ರದರ್ಶನಗಳು, ದನಗಳ ಜಾತ್ರೆ, ಜಾನಪದ ಜಾತ್ರೆ, ಕುಸ್ತಿ ಪಂದ್ಯಾವಳಿ, ನಗೆ ಉತ್ಸವ, ನಾಟಕ, ನೃತ್ಯ, ವಚನಗಾಯನ, ಸುಗಮ ಸಂಗೀತ, ಯಕ್ಷಗಾನ...... ಹೀಗೆ ಎಲ್ಲಾ ರೀತಿಯ ಕಾರ್ಯಕ್ರಮಗಳು ಇಲ್ಲಿ ನಡೆಯಲಿವೆ.

ಆರು ದಿನಗಳ ಜಾತ್ರೆ: ಸುತ್ತೂರು ಜಾತ್ರೆಯು ಸುಮಾರು ಆರು ದಿನಗಳ ಕಾಲ(ಪ್ರಸಕ್ತ ವರ್ಷ ಜನವರಿ 19ರಿಂದ 24ರವರೆಗೆ) ನಡೆಯಲಿದ್ದು, ಒಂದೊಂದು ದಿನವೂ ಒಂದೊಂದು ರೀತಿಯ ವಿಶೇಷತೆಯಿರುತ್ತದೆ. ಸುತ್ತೂರಿನ ಶ್ರೀಮಠದಿಂದ ಆದಿಜಗದ್ಗುರು ಶಿವಯೋಗಿಗಳ ಉತ್ಸವಮೂರ್ತಿಯನ್ನು ಕರ್ತೃಗದ್ದುಗೆಗೆ ತರುವುದರೊಂದಿಗೆ ಜಾತ್ರೆ ಆರಂಭಗೊಳ್ಳಲಿದೆ.

ಜಾತ್ರೆಯ ಎರಡನೇ ದಿನ ಸಹಸ್ರ ಕುಂಭೋತ್ಸವ ನಡೆದರೆ, ಮೂರನೇ ದಿನದಂದು ಬೆಳಿಗ್ಗೆ ರಥೋತ್ಸವ ನಡೆಯುತ್ತದೆ. ನಾಲ್ಕನೇ ದಿನದಂದು ಸಂಜೆ ನಡೆಯುವ ಶ್ರೀ ಮಹದೇಶ್ವರ ಕೊಂಡೋತ್ಸವ ಮತ್ತು ಮುತ್ತಿನ ಪಲ್ಲಕ್ಕಿ ಉತ್ಸವ ಗಮನಸೆಳೆಯುತ್ತದೆ.

ಐದನೇ ದಿನ ರಾತ್ರಿ ಲಕ್ಷದೀಪೋತ್ಸವ ಹಾಗೂ ತೆಪ್ಪೋತ್ಸವ, ಆರನೇ ದಿನ ಅನ್ನ ಬ್ರಹ್ಮೋತ್ಸವ, ಶ್ರೀ ವೀರಭದ್ರೇಶ್ವರ ಕೊಂಡೋತ್ಸವಗಳು ನಡೆಯುತ್ತವೆ. ಜಾತ್ರೆಯ ಸಂದರ್ಭ ನಡೆಯುವ ಕಲಾತಂಡಗಳ ಮೆರವಣಿಗೆ ಛತ್ರಿ, ಚಾಮರ, ಸೂರಾಪಾನಿ, ಗಾರುಡಿಗೊಂಬೆ, ಮರಗಾಲು ಕುಣಿತ, ನೃತ್ಯ, ವೀರಗಾಸೆ, ಡೊಳ್ಳು ಹಾಗೂ ಪೂಜಾ ಕುಣಿತ, ಕರಡಿ ಮೇಳ, ನಾದಸ್ವರ ಸೇರಿ ವಿವಿಧ ಜನಪದ ಕಲಾತಂಡಗಳೊಂದಿಗೆ ಸಾಗುತ್ತಿದ್ದರೆ ಅದನ್ನು ನೋಡುವುದೇ ಕಣ್ಣಿಗೊಂದು ಹಬ್ಬವಾಗುತ್ತದೆ.

ಇನ್ನು ಜಾತ್ರೆಯ ಸಂದರ್ಭ ಶ್ರೀ ಕ್ಷೇತ್ರದಲ್ಲಿರುವ ಕರ್ತೃಗದ್ದುಗೆ ಮತ್ತು ಪುರಾಣ ಪ್ರಸಿದ್ಧ ದೇವಾಲಯಗಳಾದ ಶ್ರೀ ಸೋಮೇಶ್ವರ, ಶ್ರೀ ಮಹದೇಶ್ವರ, ಶ್ರೀ ಶಂಕರನಾರಾಯಣ, ಶ್ರೀ ವೀರಭದ್ರೇಶ್ವರ, ಶ್ರೀ ನಾರಾಯಣಸ್ವಾಮಿ ದೇವಾಲಯಗಳಲ್ಲಿ ತ್ರಿಕಾಲ ಪೂಜೆ, ಮಹಾರುದ್ರಾಭಿಷೇಕ, ನವನೀತಾಲಂಕಾರ, ಹಸಿರುವಾಣಿ ಅಲಂಕಾರ ಹಾಗೂ ಗುರುಪರಂಪರೆಯ ಸಂಸ್ಮರಣೋತ್ಸವಗಳು ಕೂಡ ನಡೆಯುತ್ತವೆ.ಇದರಲ್ಲಿ ಇನ್ನಷ್ಟು ಓದಿ :  

ಉತ್ಸವಗಳು

ಅಷ್ಟಮಿ ವಿಶೇಷ: ಕೃಷ್ಣಂ ವಂದೇ ಜಗದ್ಗುರುಂ...

ವೇದಗಳನ್ನು ಉದ್ಧರಿಸಿದ (ಮತ್ಸ್ಯಾವತಾರಿ), ಜಗತ್ತನ್ನು ಹೊತ್ತ (ಕೂರ್ಮಾವತಾರಿ), ಭೂಮಿಯನ್ನು ರಕ್ಷಿಸಿದ ...

ಮಾಹೇಶ್ವರದಲ್ಲಿ ಮಹಾಮೃತ್ಯುಂಜಯ ರಥ ಯಾತ್ರೆ

ಮಾಹೇಶ್ವರ (ಮ.ಪ್ರ.): ಐತಿಹಾಸಿಕವಾದ ಮಹಾಬಲೇಶ್ವರದಲ್ಲಿ ಭಾನುವಾರ (ಜ.9) ಖ್ಯಾತ ಮಹಾಮೃತ್ಯುಂಜಯ ರಥ ಯಾತ್ರೆ ...

ಬಾಬಾ ಜನ್ಮದಿನ: ಸತ್ಯ ಸಾಯಿ ವಿದ್ಯಾ ವಾಹಿನಿ ಯೋಜನೆ ಜಾರಿ

ಪುಟ್ಟಪರ್ತಿ: ಶ್ರೀ ,ಸತ್ಯ ಸಾಯಿಬಾಬಾ 85ನೇ ಜನ್ಮದಿನಾಚರಣೆ ಅಂಗವಾಗಿ ನವೆಂಬರ್ 15ರಿಂದ ನವೆಂಬರ್ ...

ಯುವಕರಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿಕೆ ಅಗತ್ಯ:ಪ್ರಧಾನಿ

ಪುಟ್ಟಪರ್ತಿ: ಯುವಕರು ಮೌಲ್ಯಾಧಾರಿತ ಶಿಕ್ಷಣದಿಂದ ಮಾತ್ರ ಯಶಸ್ವಿನತ್ತ ಪಯಣ ಬೆಳೆಸಲು ಸಾಧ್ಯ.ಸತ್ಯ ಸಾಯಿ ...