ತಮಿಳುನಾಡು: ಪುತ್ರ ಅಳಗಿರಿಗೆ ಕೊಕ್ ನೀಡಿದ ಕರುಣಾನಿಧಿ

ಶುಕ್ರವಾರ, 14 ಮಾರ್ಚ್ 2014 (17:10 IST)

PR
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ 40 ಜನರ ಅಭ್ಯರ್ಥಿಗಳ ಪಟ್ಟಿಯನ್ನು ಡಿಎಂಕೆ ಅಧ್ಯಕ್ಷ ಎಂ ಕರುಣಾನಿಧಿ ಸೋಮವಾರ ಬಿಡುಗಡೆ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವರಾಗಿದ್ದ, ಟಿ.ಆರ್ ಬಾಲು, ದಯಾನಿದಿ ಮಾರನ್, ಎ ರಾಜಾ, ಎಸ್ ಜಗತ್ರಾಕ್ಷಕನ್ ಮತ್ತು ಎಸ್ ಗಾಂಧಿ ಸೆಲ್ವನ್ ಅವರಿಗೆ ಮತ್ತೆ ಟಿಕೆಟ್ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

2ಜಿ ಹಗರಣದಲ್ಲಿ ರಾಜ ಮತ್ತು ದಯಾನಿಧಿ ಮಾರನ್ ಹೆಸರು ಕೇಳಿಬಂದಿತ್ತು, ಇಷ್ಟಾದರೂ ಇಬ್ಬರಿಗೂ ಚುನಾವಣೆಯಲ್ಲಿ ಸ್ಫರ್ಧಿಸಲು ಕರುಣಾನಿಧಿ ಟಿಕೆಟ್ ನೀಡಿದ್ದಾರೆ. ಆದರೆ ಕನಿಮೊಳಿ ಮತ್ತು ಮಗ ಅಳಗಿರಿಗೆ ಟಿಕೆಟ್ ನೀಡದೆ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ.

ತಂಜಾವೂರ್ ಕ್ಷೇತ್ರದಿಂದ ಟಿ ಆರ್ ಬಾಲು, ಚೈನ್ನೈನ ಕೇಂದ್ರ ಭಾಗದಿಂದ ದಯಾನಿಧಿ ಮಾರನ್, ನಿಲಿಗೀರಸ್ ಕ್ಷೇತ್ರದಿಂದ ಎ ರಾಜಾ, ಚೈನ್ನೈ ಉತ್ತರ ಕ್ಷೇತ್ರದಿಂದ ಆರ್ ಗಿರಿರಾಜನ್, ಚೈನ್ನೈ ದಕ್ಷಿಣ ಕ್ಷೇತ್ರದಿಂದ ಟಿಕೆಎಸ್ ಎಲಾಂಗಾವನ್ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಒಟ್ಟು 40 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...