ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. ಯುಗಾದಿ ಪದದ ಉತ್ಪತ್ತಿ ಯುಗ+ಆದಿ - ಹೊಸ ಯುಗದ ಆರಂಭ ಎಂದು. ಸಾಂಪ್ರದಾಯಿಕ ಆಚರಣೆಗಳು• ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದ ಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ ಬೇವು-ಬೆಲ್ಲ. ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು