ಉತ್ತಮ ಆರೋಗ್ಯಕ್ಕೆ ರಾಮಬಾಣ ಬೀಟ್ರೂಟ್ ರಸ

ಸೋಮವಾರ, 26 ಸೆಪ್ಟಂಬರ್ 2016 (17:51 IST)

ಪ್ರತಿದಿನ ಒಂದು ಬಟ್ಟಲು ಬೀಟ್ ರೂಟಿನ ರಸವನ್ನು ಸೇವಿಸಿದರೆ ರಕ್ತದೊತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು. ಎನ್ನುವ ಹೊಸ ಸಂಗತಿಯನ್ನು ಇಂಡಿಯನ್ ರಿಸರ್ಚರ್ ಕಂಡು ಹಿಡಿದಿದೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕೆಲವು ಮಂದಿ 8 ಔನ್ಸ್ ನಷ್ಟು ಬೀಟ್ ರೂಟ್ ರಸದ ಸೇವನೆಯನ್ನು ಮಾಡಿ 10 ಎಂಎಂ ಎಚ್ಜಿ ಯಷ್ಟರ ಪ್ರಮಾಣದ ರಕ್ತದೊತ್ತಡವನ್ನು ಕಡಿಮೆ ಮಾಡಿಕೊಂಡಿದ್ದಾರೆ. 

15 ರೋಗಿಗಳ ಮೇಲೆ ಈ ಪ್ರಯೋಗ ನಡೆಸಲಾಯಿತು. ಆಗ ಅವರಲ್ಲಿ ಅಧಿಕ ರಕ್ತದೊತ್ತಡದ ಪ್ರಮಾಣ ಇಳಿಮುಖವಾದದ್ದು ಕಂಡು ಬಂದಿತು. ಅದರಲ್ಲೂ ಸೇವಿಸಿದ 3 ರಿಂದ 6 ಗಂಟೆ ನಂತರ ಅತ್ಯುತ್ತಮವಾದ ಫಲಿತಾಂಶ ಕಂಡು ಬಂದಿತು ಎಂದು ಅಧಿಕ ರಕ್ತದೊತ್ತಡದ ಫಲಿತಾಂಶದಿಂದ ತಿಳಿದುಬಂದಿದೆ.
 
ಬೀಟ್ ರೂಟ್ನಲ್ಲಿರುವ ನೈಟ್ರೇಟ್ ರಕ್ತ ಕಣ ಗಳನ್ನು ಅಗಲಗೊಳಿಸುತ್ತದೆ ರಕ್ತ ಸಂಚಾರವನ್ನು ಸುಗಮಗೊಳಿಸುತ್ತದೆ .ಎದೆ ನೋವಿನಿಂದ ಬಳಲುವವರು ನೈಟ್ರೇಟ್ ನ್ನು ಬಳಸುತ್ತಾರೆ ಎಂದಿದ್ದಾರೆ ವಿಜ್ಞಾನಿಗಳು.ಎಂದರೆ ಈ ಸಮಸ್ಯೆಯ ಪರಿಹಾರವೂ ಸಹ ಬೀಟ್ ರೂಟ್ನಲ್ಲಿದೆ ಎಂದಾಯಿತು.ಲಂಡನ್ ಮೆಡಿಕಲ್ ಶಾಲೆಗೆ ಸೇರಿರುವ ಬಾರ್ಟ್ ಹೆಲ್ತ್ ಎನ್ ಎಚ್ ಎಸ್ ಟ್ರಸ್ಟ್ ನ ಸಂಶೋಧಕರು ನಡೆಸಿದ ಸಂಶೋಧನೆಯಿಂದ ಈ ಸಂಗತಿ ದೃಢಪಟ್ಟಿದೆ.
 
ಇವರು ಹಲವು ವರ್ಷಗಳ ಕಾಲ ಇದರ ಬಗ್ಗೆ ಅಧ್ಯಯನ ನಡೆಸಿದ ಬಳಿಕ ಈಸಂಗತಿ ತಿಳಿದುಬಂದಿದೆ. ಅವರು ಪ್ರಯೋಗನಡೆಸುತ್ತಿದ್ದಾಗ ಒಂದು ಅನಿರೀಕ್ಷಿತ ಸಂಗತಿ ಗೋಚರವಾಯಿತು. ಈ ರಸವನ್ನು ಸೇವಿಸಿದ ವ್ಯಕ್ತಿಗಳ ಮೂತ್ರ ಗುಲಾಬಿ ಬಣ್ಣಕ್ಕೆ ಬದಲಾಯಿತಂತೆ.ಅಂದರೆ ಇದು ಮೂತ್ರ ಬಣ್ಣದ ಮೇಲೂ ಪ್ರಭಾವ ಬೀರುತ್ತದೆ ಎನ್ನುವ ಸಂಗತಿ ಅರಿವು ವಿಜ್ಞಾನಿಗಳಿಗೆ ಮೂಡಿತಂತೆ. ನೈಟ್ರೆಟ್ ಮಣ್ಣಿನಿಂದ ದೊರಕುತ್ತದೆ.ಅದನ್ನು ಹೀರಿ ತರಕಾರಿ ಬೆಳೆಯುತ್ತದೆ.ಪುಟ್ಟ ನೈಟ್ರೇಟ್ ನಿಂದ ಎಷ್ಟೊಂದು ಪ್ರಯೋಜನಗಳಿವೆ ಎನ್ನುವ ಸಂಗತಿಗಳು ಬೆಳಕಿಗೆ ಬಂದಾಗ ನಮಗೆ ತುಂಬಾ ಆಶ್ಚರ್ಯವಾಗಿತ್ತು ಎನ್ನುವ ಅಭಿಪ್ರಾಯ ಸಂಶೋಧಕ ಡಾ. ಅಮ್ರಿತ್ ಅಹ್ಲುವಾಲಿಯ ಅವರಿಂದ ಬಂದಿದೆ. ಹಸಿರು ಸೊಪ್ಪುಗಳು ಮತ್ತು ಬೀಟ್ರೂಟ್ ನಲ್ಲಿ ಜೀರ್ಣವಾಗಿ ನೈಟ್ರೇಟ್ ಪ್ರಮಾಣ ಹೇರಳವಾಗಿದೆ.ಇದು ಹೃದಯದ ಆರೋಗ್ಯವನ್ನು ನಿಸ್ಸಂದೇಹವಾಗಿ ಕಾಪಾಡುತ್ತದೆ.ಬ್ರಿಟಿಷ್ ಹಾರ್ಟ್ ಫೌಂಡೇಷನ್ ನ ವೈದ್ಯಕೀಯ ನಿರ್ದೇಶಕರಾದ ಪ್ರೊ.ಪೀಟರ್ ವಿಸ್ಬೆರಗ್ ಹೇಳೋದಿಷ್ಟೆ.. ನಮಗೆ ತರಕಾರಿ ಸೇವನೆಯ ಮಹತ್ವ ತಿಳಿದಿದೆ. ಆದರೆ ಯಾವ ತರಕಾರಿಗಳಲ್ಲಿ ನೈಟ್ರೇಟ್ ಪ್ರಮಾಣಹೆಚ್ಚಿದೆ ಎಂದು ತಿಳಿದು ರಕ್ತದೊತ್ತಡದವನ್ನು ದೂರ ಮಾಡಿಕೊಳ್ಳುವತ್ತ ಗಮನ ನೀಡಬೇಕು.
 
ಇಷ್ಟು ದಿನಗಳ ಕಾಲ ಈ ತರಕಾರಿ ರಕ್ತಹೀನತೆಯನ್ನು ದೂರ ಮಾಡುತ್ತಿತ್ತು.. ಈಗ ಅಧಿಕರಕ್ತದೊತ್ತಡಕ್ಕೂ ಸಹ ಕಡಿವಾಣ ಹಾಕುತ್ತದೆ .

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ ಇದರಲ್ಲಿ ಇನ್ನಷ್ಟು ಓದಿ :  

ಆರೋಗ್ಯ

news

ಅತಿ ಹೆಚ್ಚು ಮೊಬೈಲ್ ಫೋನ್ ಬಳಕೆ ತರಲಿದೆ ಕಿವುಡುತನ

ನಿರಂತರ ಮೊಬೈಲ್ ಬಳಕೆದಾರರೇ ಎಚ್ಚರಿಕೆ!. ನೀವು ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಮೊಬೈಲ್ ...

news

ಮಹಿಳೆಯರ ಲೈಂಗಿಕ ಆಸಕ್ತಿ ಕೆರಳಿಸುವ ಹೊಸ ವಯಾಗ್ರ?

ಖಿನ್ನತೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿರುವ ಫ್ಲಿಬನ್‌ಸೆರಿನ್ ಮಹಿಳೆಯರಲ್ಲಿ ಲೈಂಗಿಕ ಆಸಕ್ತಿಯನ್ನು ...

news

ದೇಹದ ಭಾರ ಕಡಿಮೆಗೊಳಿಸಲು ಇಲ್ಲಿದೆ ಸುಲಭವಾದ ಟಿಪ್ಸ್

ಪ್ರೊಟೀನ್ ಅಂಶಗಳು, ಲ್ಯಾಕ್ಟೋಸ್ ಸಕ್ಕರೆ ಮತ್ತು ತನ್ನ ಸಾಂದ್ರತೆಯಿಂದಾಗಿ ಕೆನೆರಹಿತ ಹಾಲು (ಸ್ಕಿಮ್ಡ್ ...

news

ಜನಸಂಖ್ಯೆ ಹೆಚ್ಚಿಸಲು ಇಲ್ಲಿ ಸೆಕ್ಸ್‌‌ಮಾಡಲು ರಜೆ ಸಿಗುತ್ತೆ

ಸಾಮಾನ್ಯವಾಗಿ ಮದುವೆಯಾದ ನಂತರ ಸಾಂಪ್ರದಾಯಿಕ ವಿಧಿವಿಧಾನದ ನಂತರ ಮೊದಲ ರಾತ್ರಿಯಲ್ಲಿ ಸೆಕ್ಸ್‌ ಮಾಡಲು ...