ಕೂದಲು ಉದುರುವುದು! ಬಹಳಷ್ಟು ಮಂದಿಗೆ ಇದೊಂದು ಗಂಭೀರ ಸಮಸ್ಯೆ. ಕೂದಲು ಉದುರುತ್ತಿರುವ ಬಗ್ಗೆ ತಲೆ ಬಿಸಿ ಮಾಡಿಯೇ ಇನ್ನಷ್ಟು ಕೂದಲು ಉದುರಿಸಿಕೊಳ್ಳಬೇಕಾದ ಅನಿವಾರ್ಯತೆ ಅವರದ್ದು. ವಂಶಪಾರಂಪರ್ಯದ ಬೋಳುತಲೆಯ ಶಾಪ ಕೆಲವರಿಗಾದರೆ, ಬಹಳಷ್ಟು ಮಂದಿಗೆ ಆಧುನಿಕ ಜೀವನ ಶೈಲಿ, ಬದಲಾದ ಆಹಾರ ಕ್ರಮದಿಂದಾಗಿಯೇ ಕೂದಲು ಉದುರುವ ಸಮಸ್ಯೆ ಶಾಪವಾಗಿ ಕಾಡುತ್ತದೆ ಎಂಬುದೂ ಸತ್ಯ. ಹೆಚ್ಚಿನ ಪ್ರಮಾಣದಲ್ಲಿ ಟೀ, ಕಾಫಿ, ಆಲ್ಕೋಹಾಲ್, ಮಾಂಸ ಸೇವನೆ, ಸಿಗರೇಟು ಸೇದುವುದು, ಹೆಚ್ಚು ಜಂಕ್ ಫುಡ್