ಅತಿಯಾದ ಮಾನಸಿಕ ಒತ್ತಡ ಮತ್ತು ಸರಿಯಾದ ಆಹಾರ ಕ್ರಮ ಪಾಲಿಸದೆ ಇರುವುದರಿಂದ ಅನೇಕ ಜನರಿಗೆ ಚಿಕ್ಕ ವಯಸ್ಸಿನಲ್ಲಿಯೇ ಮಧುಮೇಹ ಬರುತ್ತಿರುವುದನ್ನು ನಾವು ಕಾಣಬಹುದಾಗಿದೆ. ನಮ್ಮ ದೇಶದಲ್ಲಿ ಬಹುತೇಕರು ಮಧುಮೇಹದಿಂದ ಬಳಲುತ್ತಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ಹಾಗಾಗಿ ನಮ್ಮ ದೇಹದಲ್ಲಿರುವ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಆರೋಗ್ಯಕರವಾಗಿ ಕಾಪಾಡಿಕೊಳ್ಳುವುದು ಅವಶ್ಯಕವಾಗಿದೆ. ಇದು ನಿಯಂತ್ರಣ ತಪ್ಪಿದ್ದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ, ಹಾಗಾಗಿ ಸರಿಯಾದ ಆಹಾರ ಸೇವನೆ ಮತ್ತು ವ್ಯಾಯಾಮ ಮಾಡುವುದು ತುಂಬಾ ಅವಶ್ಯಕವಾಗಿದೆ. ಅನಿಯಂತ್ರಿತ ರಕ್ತದಲ್ಲಿನ