ಸೀಬೇಕಾಯಿ ಸುಲಭವಾಗಿ ಸಿಗುವ ಹಣ್ಣು. ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಸೀಬೇಕಾಯಿ ನಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಎಷ್ಟು ಉಪಯುಕ್ತ ಎಂದು ಗೊತ್ತಾ? ರೋಗ ನಿರೋಧ ಶಕ್ತಿ ಸೀಬೇಕಾಯಿಯಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದೆ. ಹಾಗಾಗಿ ಇದು ಉತ್ತಮ ರೋಗ ನಿರೋಧಕ ಶಕ್ತಿ ಒದಗಿಸುತ್ತದೆ. ಕ್ಯಾನ್ಸರ್ ದೂರ ಮಾಡುತ್ತದೆ ಸೀಬೇಕಾಯಿಯಲ್ಲಿರುವ ಪೋಷಕಾಂಶಗಳು ಕ್ಯಾನ್ಸರ್ ಕಣಗಳು ಬೆಳೆಯದಂತೆ ನೋಡಿಕೊಳ್ಳುತ್ತದೆ. ಅದರಲ್ಲೂ ವಿಶೇಷವಾಗಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್ ಬಾರದಂತೆ ತಡೆಯುತ್ತದೆ.