ಅಧಿಕ ರಕ್ತದೊತ್ತಡ, ಹೃದ್ರೋಗ, ಕ್ಷಯ ಮತ್ತು ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳಿಗಾಗಿ ತಯಾರಿಸುವ ಔಷಧಗಳಿಗೆ ಬೆಳ್ಳುಳ್ಳಿ ಬೇಕೇ ಬೇಕು. ಆಯುರ್ವೇದ ವೈದ್ಯಕೀಯ ಪದ್ಧತಿಯಲ್ಲಿ ಬಹು ಬೇಡಿಕೆಯುಳ್ಳದ್ದಾಗಿದೆ. ಅಲ್ಲಿಯಂ ಸಟೈವಮ್ ಎಲ್ ಎನ್ನುವಂತಹ ಶಾಸ್ತ್ರೀಯ ಹೆಸರನ್ನು ಬೆಳ್ಳುಳ್ಳಿ ಪಡೆದಿದೆ. ಜಗತ್ತಿನಲ್ಲಿ ಚೀನಾದವರು ಅತಿ ಹೆಚ್ಚು ಬೆಳ್ಳುಳ್ಳಿಯನ್ನು ಬೆಳೆಯುತ್ತಾರೆ. ನಮ್ಮ ದೇಶದ ಉತ್ಪಾದನೆ ಮತ್ತು ಬೆಳೆಯುವ ಪ್ರದೇಶವನ್ನು ಗಮನಿಸಿದಾಗ ಮಧ್ಯ ಪ್ರದೇಶ ಪ್ರಥಮ ಸ್ಥಾನದಲ್ಲಿದೆ. ಶೇ. 35 ರಷ್ಟು ವಿಸ್ತೀರ್ಣದಲ್ಲಿ ಬೆಳ್ಳುಳ್ಳಿ ಬೆಳೆಯುತ್ತಾರೆ.