ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ ಸಾಮಾನ್ಯ ಆರೋಗ್ಯ ಸಮಸ್ಯೆಯಾಗಿದೆ. ಒತ್ತಡದ ಜೀವನಶೈಲಿಯ ಕಾರಣದಿಂದಾಗಿ ಅನೇಕ ಜನರು ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದನ್ನು ಸರಿಯಾಗಿ ನಿರ್ವಹಿಸದಿದ್ದರೆ, ಅಂತಿಮವಾಗಿ ಇದು ಹೃದಯರಕ್ತನಾಳಗಳ ಕಾಯಿಲೆಗಳು ಸೇರಿದಂತೆ ಹಲವಾರು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.ಹಾಗಾಗಿ ಆರೋಗ್ಯಕರ ಜೀವನಶೈಲಿಯನ್ನು ಪಾಲಿಸುವ ಮೂಲಕ ರಕ್ತದೊತ್ತಡವನ್ನು ಖಂಡಿತವಾಗಿಯೂ ನಿಯಂತ್ರಣದಲ್ಲಿಡಬಹುದು. ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ನಾವು ಸೇವಿಸುವಂತಹ ಆಹಾರಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ.ಹೆಚ್ಚಿನ ಪ್ರಮಾಣದ ಸೋಡಿಯಂ ಹೊಂದಿರುವ ಆಹಾರದ ಸೇವನೆಯು ಅಧಿಕ ರಕ್ತದೊತ್ತಡವನ್ನು