ಬೆಂಗಳೂರು : ಅತಿಯಾದ ಕೊಬ್ಬಿನ ಅಂಶಗಳಿರುವ ಆಹಾರವನ್ನು ಸೇವಿಸುವುದರಿಂದ ಹೆಚ್ಚಿನವರು ಹೃದಯ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಅಲ್ಲದೇ ಒತ್ತಡ, ಚಿಂತೆ, ಸುತ್ತಮುತ್ತಲಿನ ಪರಿಸರ ಹೀಗೆ ಹಲವು ಕಾರಣಗಳಿಂದ ಹೃದಯದ ಸಮಸ್ಯೆ ಎದುರಾಗುತ್ತದೆ. ಕೆಲವು ಹಣ್ಣುಗಳು ಮತ್ತು ತರಕಾರಿಗಳನ್ನು ಹೆಚ್ಚಾಗಿ ಸೇವಿಸುವುದರಿಂದ ಹೃದಯ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.ಮೆಂತ್ಯ ಕಾಳು ಹಾಗೂ ಮೆಂತ್ಯಸೊಪ್ಪನ್ನು ಸೇವಿಸುವುದರಿಂದ ಇದು ರಕ್ತದಲ್ಲಿರುವ ಸಕ್ಕರೆ ಅಂಶ ಕಡಿಮೆಮಾಡಿ, ರಕ್ತ ಹೆಪ್ಪುಗಟ್ಟದಂತೆ ತಡೆಗಟ್ಟುತ್ತದೆ. ಸೋಯಾ ಮತ್ತು ಬೆಳ್ಳುಳ್ಳಿ ತಿನ್ನುವುದರಿಂದ ರಕ್ತದಲ್ಲಿರುವ ಲಿಪಿಡ್ಸ್