ಇತ್ತೀಚಿನ ದಿನಗಳಲ್ಲಿ ದೇಹದಲ್ಲಿ ಕೊಬ್ಬಿನ ಶೇಖರಣೆಯ ಸಮಸ್ಯೆ ಒಂದು ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಅಂಗಗಳನ್ನು ರಕ್ಷಿಸಲು ದೇಹದ ಕೆಲವು ಭಾಗಗಳಲ್ಲಿ ಕೊಬ್ಬಿನ ಶೇಖರಣೆ ಅತ್ಯಗತ್ಯ. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕೊಬ್ಬು ಸಂಗ್ರಹವಾದಾಗ, ಅದು ನಿಮ್ಮ ಆರೋಗ್ಯ ಮತ್ತು ಫಿಟ್ನೆಸ್ ಮಟ್ಟಗಳ ಮೇಲೆ ಪರಿಣಾಮ ಬೀರಲು ಆರಂಭಿಸುತ್ತದೆ. ಪುರುಷರು ಮತ್ತು ಮಹಿಳೆಯರು ಇಬ್ಬರೂ ದೇಹದ ವಿವಿಧ ಭಾಗಗಳಲ್ಲಿ ಕೊಬ್ಬನ್ನು ಹೊಂದಿರುತ್ತಾರೆ. ಮಹಿಳೆಯರಿಗೆ ಸಾಮಾನ್ಯವಾಗಿ ಸೊಂಟ, ತೊಡೆ ಮತ್ತು ಹೊಟ್ಟೆಯ ಕೆಳಭಾಗದಲ್ಲಿ ಕೊಬ್ಬು