ಬೆಂಗಳೂರು : ಹಾಲು ಒಡೆದು ಹೋದಾಗ ಅದನ್ನು ಹೊರಗೆ ಚೆಲ್ಲುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಮಾಡಬೇಡಿ. ಯಾಕೆಂದರೆ ಒಡೆದ ಹಾಲಿನಲ್ಲಿ ಸಾಕಷ್ಟು ಪೌಷ್ಟಿಕಾಂಶವಿರುತ್ತದೆಯಂತೆ. ಅಲ್ಲದೇ ಇದರಿಂದ ನಿಮ್ಮ ಸೌಂದರ್ಯವನ್ನು ವೃದ್ಧಿಸಿಕೊಳ್ಳಬಹುದಂತೆ. ಹೌದು. ಒಡೆದ ಹಾಲಿನ ನೀರಿನಲ್ಲಿ ಪ್ರೋಟೀನ್ ಗಳ ಪ್ರಮಾಣವು ತುಂಬಾ ಹೆಚ್ಚಾಗಿದ್ದು, ರೋಗ ನಿರೋಧಕ ಶಕ್ತಿಯು ಅಧಿಕವಾಗಿದೆಯಂತೆ. ಅದು ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು ಎಂದು ಹಲವು ಸಂಶೋಧನೆಯಿಂದ